ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಶಾಕಿಂಗ್ ಎದುರಾಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ಗೆ ನಿರಾಸೆಯಾಗಿದೆ. ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಡಲು ಹೈಕೋರ್ಟ್ ನಿರಾಕರಣೆ ಮಾಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದೆ. ಕೆಳಹಂತದ ನ್ಯಾಯಾಲಯವು ತಮಗೆ ನೀಡಿರುವ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಜಾಮೀನು ನೀಡುವಂತೆ ಮನವಿ ಮಾಟಿದ್ದರು.
ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ವಿಧಿಸಿರುವ ಜೀವಿತಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ಮಂಜೂರು ಮಾಡುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಮತ್ತು ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ನೀಡಲು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.
ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಆಗಸ್ಟ್ 2025ರಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಪ್ರಜ್ವಲ್ ಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು 11 ಲಕ್ಷಕ್ಕೂ ಅಧಿಕ ವಿಧಿಸಿ ಆದೇಶ ನೀಡಿದೆ. ವಿಧಿಸಲಾಗಿರುವ ದಂಡದ ಬಹುಪಾಲನ್ನು ಸಂತ್ರಸ್ತೆಗೆ ನೀಡುವಂತೆ ಕೋರ್ಟ್ ಹೇಳಿದೆ.
ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ, ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ಬಾಕಿ ಇರುವಾಗಲೇ ತಮಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ನೀಡಲು ನಿರಾಕರಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















