ನಿರಪರಾಧಿಗೆ ಶಿಕ್ಷೆಯಾಗದಂತೆ ವಕೀಲರು ಕರ್ತವ್ಯ ನಿರ್ವಹಿಸಬೇಕು: ಶಾಸಕ ಟಿ ರಘುಮೂರ್ತಿ

2 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 03 : ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ಕಾರ್ಯಾಂಗ ಶಾಸಕಾಂಗ ನ್ಯಾಯಾಂಗ ಹಾಗೂ ಪತ್ರಿಕಾ ರಂಗ ತಮ್ಮ ಕೆಲಸಗಳನ್ನು ನಿರ್ವಹಿಸುತ್ತಿದ್ದು ಕಾರ್ಯಾಂಗ ಶಾಸಕಾಂಗ ಮಾಡಿದ ತಪ್ಪನ್ನು ತಿದ್ದಲು ನ್ಯಾಯಾಂಗ ವ್ಯವಸ್ಥೆ ಇದ್ದು ಅತ್ಯಂತ ಜವಾಬ್ದಾರಿಯುತವಾಗಿ ತನ್ನ ಕೆಲಸವನ್ನು ನಿರ್ವಹಿಸುತ್ತಿದೆ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯ ಪಟ್ಟರು.

ನಗರದ ವಕೀಲರ ಸಂಘದ ವತಿಯಿಂದ ನಗರದ ನ್ಯಾಯಾಲಯ ಆವರಣದಲ್ಲಿ ನಡೆದ ವಕೀಲರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಜನಪ್ರತಿನಿಧಿಗಳು ಕಾನೂನಿನ ಅರಿವು ತಿಳಿದುಕೊಂಡಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸಲು ಸಾಧ್ಯ 100 ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂಬ ನಿಯಮವಿದ್ದು ಇದರ ಅಡಿಯಲ್ಲಿ ಕಕ್ಷಿದಾರರಿಗೆ ನ್ಯಾಯವನ್ನು ದೊರಕಿಸಿಕೊಡಲು ವಕೀಲರು ಕೆಲಸ ನಿರ್ವಹಿಸಬೇಕು ವಕೀಲರಿಗೆ ತಮ್ಮ ವೃತಿ ಬದುಕಿನಲ್ಲಿ ಇಚ್ಚಾ ಶಕ್ತಿ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ವಕೀಲರ ಸಂಘದ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಬದ್ಧನಾಗಿದ್ದೇನೆ ಚಳ್ಳಕೆರೆ ತಾಲೂಕಿನಲ್ಲಿ ಜಿಲ್ಲಾ ಉಪ ವಿಭಾಗಾಧಿಕಾರಿ ಕಚೇರಿ ತೆರೆಯಲು ಪ್ರಯತ್ನಗಳು ನಡೆಯುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ನ್ಯಾಯಾಧೀಶ ಸಮೀರ್ ಪಿ ನಂದ್ಯಾಲ್ ಮಾತನಾಡಿ ಸಾರ್ವಜನಿಕರಲ್ಲಿ ನ್ಯಾಯಾಂಗದ ಬಗ್ಗೆ ಇರುವ ಕಲ್ಪನೆಗಳನ್ನು ಬದಲಾಯಿಸಬೇಕು ವಕೀಲರು ತನ್ನ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಯುವ ವಕೀಲರು ಹಿರಿಯ ವಕೀಲರ ಮಾರ್ಗದರ್ಶನ ಪಡೆದು ಮುಂದೆ ಸಮಾಜದಲ್ಲಿ ಉತ್ತಮ ವಕೀಲರಾಗಿ ರೂಪುಗೊಳ್ಳಬೇಕು ಲೋಕ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಆಗುವ ಪ್ರಕರಣಗಳನ್ನು ವಕೀಲರು, ಕಕ್ಷಿದಾರರಿಗೆ ಮನವರಿಕೆ ಮಾಡಿ ರಾಜಿ ಸಂಧಾನ ಮಾಡುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದು ತಿಳಿಸಿದರು.

ನ್ಯಾಯಾಧೀಶೆ ಎಚ್ ಆರ್ ಹೇಮಾ ಮಾತನಾಡಿ ಸ್ವಾತಂತ್ರ್ಯ ಹೋರಾಟಗಳಲ್ಲಿ ವಕೀಲರ ಪಾತ್ರ ದೊಡ್ಡದಿದೆ ವಕೀಲರು ಸಹ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ, ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡಲು ಹೆಚ್ಚಿನ ಜ್ಞಾನ ಅವಶ್ಯಕವಿದೆ ವಕೀಲರು ಯಶಸ್ಸು ಸಾಧಿಸಲು ವೃತ್ತಿ ಬದುಕಿನಲ್ಲಿ ಕ್ರಿಯಾಶೀಲವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಿದಾಗ ಮಾತ್ರ ಹೆಸರು ಗಳಿಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲರನ್ನು ಸನ್ಮಾನಿಸಲಾಯಿತು ಹಾಗೂ ಕಿರಿಯ ವಕೀಲರನ್ನು ಬಾರ್ ಕೌನ್ಸಿಲ್ ಸಮಿತಿಗೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ ಎಂ ನಾಗರಾಜ್, ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಧೀಶರಾದ ಸಮೀರ್ ನಂದ್ಯಾಲ, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಹೆಚ್.ಆರ್.ಹೇಮಾ, ವಕೀಲರ ಸಂಘದ ಉಪಾಧ್ಯಕ್ಷ ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಸಿದ್ಧರಾಜು, ಸಹ ಕಾರ್ಯದರ್ಶಿ ರಾಮಕೃಷ್ಣ, ಖಜಾಂಚಿ ಟಿ.ರುದ್ರಯ್ಯ, ವಕೀಲರಾದ ಮಲ್ಲಿಕಾರ್ಜುನ್, ಬಾಲಕೃಷ್ಣಸ್ವಾಮಿ, ಹನುಮಂತರಾಯ, ಕುಮಾರ್, ಶ್ರೀನಿವಾಸ ಮೂರ್ತಿ, ಬೀರಪ್ಪ, ಪ್ರಕಾಶ್, ತಿಪ್ಪೇಸ್ವಾಮಿ, ಹನುಮಂತರಾಯ, ಬೋರಯ್ಯ, ಶ್ಯಾಮಲ, ಶರಣಪ್ಪಯ್ಯ, ತಮ್ಮಣ್ಣ, ಜಯಪ್ಪ, ಪ್ರಭಾಕರ, ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article