Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪಲೋಕಾಯುಕ್ತರ ಮಾತಿನ ಬಳಿಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ

---Advertisement---

ಬೆಂಗಳೂರು: ಕರ್ನಾಟಕ ರಾಜ್ಯವು ಭ್ರಷ್ಟಾಚಾರದ ಆಗ್ರಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದೆ .  ನಾನು ಉಪಲೋಕಾಯುಕ್ತ ಆಗಿ ನೇಮಕವಾದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ಸಿಕ್ಕಿದೆ ಎಂದು ಜಸ್ಟೀಸ್ ಬಿ.ವೀರಪ್ಪ ಹೇಳಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಆರ್ ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಭ್ರಷ್ಟಾಚಾರದ ಈ ಪಿಡುಗನ್ನು ತಡೆಯದೇ ಹೋದರೆ, ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ನಾನು ಹೋದ ಕಡೆಯಲ್ಲೆಲ್ಲಾ ಆಸ್ಪತ್ರೆ, ಶಾಲೆ, ಹಾಸ್ಟೆಲ್ ಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಶಪಥ ಕೈಗೊಳ್ಳುವಂತೆ ಅಲ್ಲಿನ ಸಿಬ್ಬಂದಿಗೆ ಪ್ರೇರೆಪಿಸುತ್ತಿದ್ದೇನೆ. ಈ ಯಜ್ಞದಲ್ಲಿ ವಕೀಲರು ಪಾಲ್ಗೊಂಡು ಭ್ರಷ್ಟಾಚಾರ ನಿರ್ಮೂಲನೆಗೆ, ಸಮಾಜ ಸುಧಾರಣೆಗೆ ಪ್ರಯತ್ನಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now