ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಂಡ್ಯ: ಆದಿಚುಂಚನಗಿರಿ ಮಠಕ್ಕೂ ದೇವೇಗೌಡರ ಕುಟಜಂಬಕ್ಕೂ ಎಷ್ಟು ಒಳ್ಳೆಯ ನಂಟು, ಭಕ್ತಿ, ಗೌರವ ಇದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಅದರಲ್ಲೂ ಸ್ವಾಮೀಜಿಗೆ ನನ್ನಿಂದ ಅಪಚಾರವಾಗಿದ್ರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂಬ ಮಾತನ್ನ ಹೇಳಿದ್ದಾರೆ.
ಇಂದು ವಿಸಿ ಫಾರ್ಮ್ ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಕೂಡ ಭಾಗಿಯಾಗಿದ್ರು. ಸ್ವಾಮೀಜಿ ಮುಂದೆಯೇ ಈ ಕ್ಷಮಾಪ್ಪಣೆಯ ಮಾತನ್ನ ಹೇಳಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದು ನಾನು ಹೇಳಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರುಗೆ ಗೊತ್ತಿಲ್ಲ.
ಬಾಲಗಂಗಾಧರನಾಥ ಸ್ವಾಮೀಜಿ ಅವರು ಸಮಾಜದ ಗೌರವ ಉಳಿಸುವುದಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿ ಇತ್ತು. ನನ್ನನ್ನು ಕಂಡರು ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತನಾಡಿದ್ದಕ್ಕೆ ಇನ್ನ್ಯಾರೋ ಮಾತನಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಶಿಕ್ಷಣ ಹೊಂದಿರುವವರು ದೇಶದ ಇತಿಹಾಸದಲ್ಲು ಮತ್ತೊಬ್ಬರು ಯಾರು ಇಲ್ಲ ಎಂದು ನಿರ್ಮಲಾನಂದನಾಥ ಸ್ವಾಮೀಜಿಯವರ ಗುಣಗಾನ ಮಾಡಿದ್ದಾರೆ. ನೀಡಿದ ಹೇಳಿಕೆಗೂ ಸ್ಪಷ್ಟನೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್