Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ಧ್ವಂಸ..!

---Advertisement---

ಚಿತ್ರದುರ್ಗ: ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಯಾಗಿದ್ದ ರೇಣುಕಾಸ್ವಾಮಿ ಸಮಾಧಿ ಈಗ ಧ್ವಂಸವಾಗಿದೆ. ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ಮಾಡಲಾಗಿತ್ತು. ಇದೀಗ ಆ ಸಮಾಧಿಯನ್ನೇ ಧ್ವಂಸ ಮಾಡಿದ್ದಾರೆ. ಚುತ್ರದುರ್ಗದ ರುದ್ರಭೂಮಿಯಲ್ಲಿ ಈ ಸಮಾಧಿ ಇತ್ತು. ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣವನ್ನ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಸಮಾಧಿ ಮೇಲಿದ್ದ ನಾಮಫಲಕವನ್ನು ಧ್ವಂಸ ಮಾಡಲಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಇದು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಈ ಕೃತ್ಯವನ್ನ ಎಸಗಿದವರು ಯಾರೆಂದು ವಿಚಾರಣೆ ಕೂಡ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾಗಿ ಒಂದು ವರ್ಷಕ್ಕಿಂತ ಜಾಸ್ತಿಯಾಗಿದೆ. ಕೆಲವು ತಿಂಗಳುಗಳ ಹಿಂದಷ್ಟೇ ವರ್ಷದ ತಿಥಿಯನ್ನು ಮಾಡಿದ್ದರು ಕುಟುಂಬಸ್ಥರು. ವರ್ಷದ ತಿಥಿಗೆ ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸಿ ಬಂದಿದ್ದರು. ಈಗ ಸಮಾಧಿಯ ನಾಮಫಲಕವನ್ನ ಯಾರೋ ಒಡೆದು ಹಾಕಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಅಶ್ಲೀಲ ಫೋಟೋಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಮತ್ತು ಸ್ನೇಹಿತರು ಕಿಡ್ನ್ಯಾಪ್ ಮಾಡಿದ್ದರು. ಎಚ್ಚರಿಕೆ ಕೊಡುವ ಭರದಲ್ಲಿ ಕೊಲೆಯೂ ನಡೆದು ಹೋಗಿದೆ‌. ಇದೇ ಕೇಸಲ್ಲಿ ಸದ್ಯ ದರ್ಶನ್ ಅಂಡ್ ಗ್ಯಾಂಗ್ ಜೈಲು ವಾಸದಲ್ಲೂ ಇದ್ದಾರೆ. ಮೊದಲು ಜೈಲು ಸೇರಿದಾಗ ದರ್ಶನ್ ಅಂಡ್ ಗ್ಯಾಂಗ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈಗ ಜಾಮೀನು ರದ್ದಾದ ಮೇಲೆ ಎರಡನೇ ಬಾರಿಗೆ ಜೈಲುವಾಸಕ್ಕೆ ಹೋಗಿದ್ದಾರೆ. ದರ್ಶನ್ ನಟನೆಯ ಡೆವಿಲ್ ಕೂಡ ಇದೇ ಸಮಯದಲ್ಲಿ ರಿಲೀಸ್ ರೆಡಿಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now