Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

3ನೇ ದಿನದ ಬೆಳಗಾವಿ ಅಧಿವೇಶನದ ಹೈಲೇಟ್ಸ್ ಇಲ್ಲಿದೆ

---Advertisement---

ಬೆಳಗಾವಿ: ಅಧಿವೇಶನಗಳು ನಡೆಯುವಾಗ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ನಾಯಕರು ಸದ್ದು ಗದ್ದಲ ಮಾಡುವುದು ಸಹಜ. ಇದೀಗ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿಗೆ ಮೂರು ದಿನವಾಗಿದೆ. ಇಂದು ಕೂಡ ಕೆಲವೊಂದು ವಿಚಾರಗಳಿಗೆ ಸದ್ದು ಗದ್ದಲ ಉಂಟಾಗಿದೆ‌. ಇಂದು ಏನೆಲ್ಲಾ ಚರ್ಚೆಗಳಾಯ್ತು ಎಂಬ ಹೈಲೇಟ್ಸ್ ಪಾಯಿಂಟ್ಸ್ ಗಳು ಇಲ್ಲಿವೆ.

* ನಾಯಕತ್ವ ಬದಲಾವಣೆಯ ವಿಚಾರದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು.

* ಉತ್ತರ ಕರ್ನಾಟಕ ಸಮಸ್ಯೆಯ ಬಗ್ಗೆ ಆರ್.ಅಶೋಕ್ ಹಾಗೂ ವಿಜಯೇಂದ್ರ ಸೇರಿದಂತೆ ಹಲವರು ಧ್ವನಿ ಎತ್ತಿದರು.

* ಲಿಂಗಾಯತರ ಮೇಲೆ ದೌರ್ಜನ್ಯ ನಡೆದು ಇಂದಿಗೆ ಒಂದು ವರ್ಷ. ಇಂದು ಕರಾಳ ದಿನ. ಈ ಸಂಬಂಧ ವಿಚಾರಣಾ ಆಯೋಗವನ್ನು ರಚನೆ ಮಾಡಲಾಗಿತ್ತು. ಆಯೋಗ ಈ ಸಂಬಂಧ ವರದಿ ಕೊಟ್ಟಿದೆ. ಆದರೆ ಯಾರ ಮೇಲೂ ಕ್ರಮ ಆಗಿಲ್ಲ ಎಂದು ಬಿಜೆಪಿ ಶಾಸಕಾಂಗ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಕಪ್ಪು ಪಟ್ಟಿ ಧರಿಸಿ ಹೋರಾಟ ಮಾಡಿದರು.

* ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ವಿಧೇಯಕವನ್ನು ಮಂಡನೆಯನ್ನು ಮಾಡಿದರು. ಆದರೆ ಈ ವಿಧೇಯಕಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

* ಇದೇ ಸದನದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಹೀಗೆ ಹಲವು ವಿಚಾರಗಳ ಚರ್ಚೆ, ಸಮಸ್ಯೆಗಳ ಚರ್ಚೆ ಜೊತೆಗೆ ಒಂದಷ್ಟು ಸ್ವಾರಸ್ಯಕರ ವಿಚಾರಗಳು ಸದನದಲ್ಲಿ ನಡೆದಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now