Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ- ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಬೆಳಗಾವಿ, ಡಿಸೆಂಬರ್ 12: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.

ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...