Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಟ್ಟೆಗಳಿಂದ ಕ್ಯಾನ್ಸರ್ : ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು..?

---Advertisement---

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಮೊಟ್ಟೆಯದ್ದೇ ಜನರಿಗೆ ಆತಂಕವಾಗಿದೆ. ಮೊಟ್ಡೆ ತಿಂದರೆ ಕ್ಯಾನ್ಸರ್ ಬರುತ್ತೆ ಎಂದು ಸಂಶೋಧನೆ ಮಾಡಿದ ಬಳಿಕವಂತು ಮೊಟ್ಟೆ ಕಂಡರೆ ಓಡಿ ಹೋಗುವವರು ಹೆಚ್ಚಾಗಿದ್ದಾರೆ. ಮನೆಯಲ್ಲಿದ್ದ ಮೊಟ್ಟೆಗಳನ್ನ ತಿನ್ನುವುದಕ್ಕೂ ಭಯ ಪಡುವಂತೆ ಆಗಿದೆ. ಆದರೆ ಈ ಮೊಟ್ಟೆ ಆತಂಕಕ್ಕೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಎಗ್ಗೋಸ್ ಮೊಟ್ಟೆಗಳು ಮನುಷ್ಯರ ಆರೋಗ್ಯಕ್ಕರ ಹಾನಿಕಾರಕವಾಗಿದೆ. ಆಂಟಿ ಬಯೋಟಿಕ್ ನಿಂದ ಈ ಮೊಟ್ಟೆಗಳನ್ನು ಬಳಸಬಾರದೆಂದು ಮಾಹಿತಿ ಇದೆ. ಈ ಸಂಬಂದ್ ಸ್ಪಷ್ಟವಾದ ವಿಚಾರಗಳನ್ನ ತಿಳಿದುಕೊಳ್ಳುವುದಕ್ಕೆ ಇಲಾಖೆಗೆ ಹೇಳಿದ್ದೇನೆ. ಯಾಕಂದ್ರೆ ಮೊಟ್ಟೆಗಳು ಮನುಷ್ಯನ ದೇಹಕ್ಕೆ ತುಂಬಾ ಒಳ್ಳೆಯದು. ಎಗ್ಗೋಸ್ ಕಂಪನಿಯ ಸ್ಯಾಂಪಲ್ ಗಳನ್ನು ತೆಗೆದುಕೊಂಡಿದ್ದಾರೆ. ಟೆಸ್ಟ್ ಮಾಡಿದ ನಂತರದಲ್ಲಿ ಈ ವಿಚಾರವನ್ನು ತಮ್ಮ ಮುಂದೆ ಇಡಲಿದ್ದೇನೆ ಎಂದು ಸುವರ್ಣ ಸೌಧದಲ್ಲಿ ತಿಳಿಸಿದ್ದಾರೆ.

ಮೊನ್ನೆ ತಾನೇ ಎಗ್ಗೋಸ್ ಕಂಪನಿಯವರ ಮೊಟ್ಟೆಯಲ್ಲಿ ಉಪಯೋಗ ಮಾಡದೆ ಇರುವಂತ ಆಂಟಿಬಯೋಟಿಕ್ ಉಪಯೋಗಿಸಿದ್ದಾರೆ ಎಂಬ ಮಾಹಿತಿ ಇತ್ತು. ಅದರಿಂದ ಅದರ ಬಗ್ಗೆ ಸ್ಪಷ್ಟವಾದ ವಿಚಾರ ತಿಳಿದುಕೊಳ್ಳಬೇಕೆಂದು ನಮ್ಮ ಇಲಾಖೆಗೆ ತಿಳಿಸಿದ್ದೇನೆ. ಸ್ಯಾಂಪಲ್ ಗಳನ್ನು ತೆಗೆದುಕೊಳ್ಳಲಾಗಿದೆ. ಸದ್ಯದಲ್ಲಿ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸುತ್ತೇನೆ. ಯಾಕಂದ್ರೆ ಕಳೆದ ಸೆಪ್ಟೆಂಬರ್ – ಅಕ್ಟೋಬರ್ ತಿಂಗಳಲ್ಲಿ ಸುಮಾರು 125 ಮೊಟ್ಟೆಗಳ‌ ಸ್ಯಾಂಪಲ್ಸ್ ಅನ್ನ ನಮ್ಮ ರಾಜ್ಯದಲ್ಲಿ ಚೆಕ್ ಮಾಡಿಸಿದ್ದೇವು. ಆಗ 123-124 ಗುಣಮಟ್ಟ ಇದೆ ಅಂತ ಬಂದಿತ್ತು. ಒಂದು ಮೊಟ್ಟೆಯ ಸ್ಯಾಂಪಲ್ ಮಾತ್ರ ಸ್ವಲ್ಪ ವ್ಯತ್ಯಾಸವಾಗಿತ್ತು. ಈಗ ಎಗ್ಗೋಸ್ ಕಂಪನಿಯ ಸುದ್ದಿ ಕೇಳಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now