Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಹೆಚ್‍ಎಎಲ್‍ನಲ್ಲಿ ಮಾಜಿ ಸೈನಿಕರಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶ

---Advertisement---

ಚಿತ್ರದುರ್ಗ. ಡಿ.16: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್  ಲಿಮಿಟೆಡ್ (ಹೆಚ್‍ಎಎಲ್)ನಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈರ್‍ಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುಕೊಳ್ಳುತ್ತಿದ್ದು, ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.26 ಅರ್ಜಿ ಸಲ್ಲಿಸಲು ಕೊನೆಯ ದಿನ.

ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ ರೂ.21000/-ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳು ಕೂಡ ಲಭ್ಯವಿದೆ.

ಮಾಜಿ ಸೈನಿಕರು ನಿಗದಿತ ನಮೂನೆಯ ಅರ್ಜಿಯನ್ನು ಇದೇ ಡಿಸೆಂಬರ್ 26ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಿ, ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08182-220982 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now