ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 16 : ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿರವರ 66 ನೇ ಹುಟ್ಟುಹಬ್ಬವನ್ನು ಜೆಡಿಎಸ್.ಕಚೇರಿಯಲ್ಲಿ ಮಂಗಳವಾರ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಜೆಡಿಎಸ್. ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿರವರು ರೈತರ ಸಾಲ ಮನ್ನ ಮಾಡಿ ಮಣ್ಣಿನ ಮಗ ಎನ್ನುವ ಹೆಸರಿಗೆ ತಕ್ಕಂತೆ ಕೃಷಿಗೆ ಹೆಚ್ಚಿನ ಒತ್ತು ಕೊಟ್ಟಿದ್ದರು. ಭಾಗ್ಯಲಕ್ಷ್ಮಿ ಯೋಜನೆ, ಗ್ರಾಮ ವಾಸ್ತವ್ಯ ಇವುಗಳು ಅವರ ಅಧಿಕಾರವಧಿಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು. ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. 2028 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿ ಎಂದು ಶುಭ ಹಾರೈಸಿದರು.
ಕೇಂದ್ರ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ರಾಜಕೀಯ ಜೀವನದುದ್ದಕ್ಕೂ ಸರಳತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಎಂದಿಗೂ ಅಧಿಕಾರದ ದರ್ಪ ಯಾರ ಮೇಲೂ ಚಲಾಯಿಸಿದವರಲ್ಲ. ಅಂತಹ ಸಜ್ಜನ ರಾಜಕಾರಣಿ ಕರ್ನಾಟಕ ರಾಜ್ಯಕ್ಕೆ ಬೇಕಾಗಿರುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನ ಆಶೀರ್ವದಿಸಿ ಮತ್ತೊಮ್ಮೆ ಅಧಿಕಾರ ನೀಡುವಂತೆ ಎಂ.ಜಯಣ್ಣ ಮನವಿ ಮಾಡಿದರು.
ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ ನಂತರ ಕಬೀರಾನಂದಾಶ್ರಮದಲ್ಲಿರುವ ವೃದ್ದರಿಗೆ ಹಾಗೂ ಶಾಲಾ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಲಾಯಿತು.
ಜೆಡಿಎಸ್.ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಓ.ಪ್ರತಾಪ್‍ಜೋಗಿ, ಚಿದಾನಂದ್, ಶಂಕರಮೂರ್ತಿ, ಎಂ.ಎಸ್.ಮಂಜುನಾಥ್, ನಾಗರಾಜು, ಗೀತಮ್ಮ, ಶಿವಪ್ರಸಾದ್‍ಗೌಡ, ಗೀತ, ಸೋಮು ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.













