ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ನಗರದ ಕೆಳಗೋಟೆಯ ನಿವಾಸಿ, ಕೆಇಬಿ ನಿವೃತ್ತ ನೌಕರ ಎಂ.ಮಲ್ಲೇಶಪ್ಪ (75 ವರ್ಷ) ಬುಧವಾರ ನಿಧನರಾದರು. ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಬಾಗೇನಾಳ್ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು ಎಂದು ಮೃತರ ಪುತ್ರ, ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಗುತ್ತಿಗೆದಾರ ಸಂಘದ ಜಿಲ್ಲಾ ಕಾರ್ಯದರ್ಶಿ
ಎಂ.ಮೈಲಾರಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಗುತ್ತಿಗೆದಾರ ಸಂಘದ ಪ್ರಮುಖರು ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.






