Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಕರಿಗೆ ಹಣ ಹಂಚಿ ಗೆದ್ದಿರುವ ಎಂಎಲ್ಸಿ ಎಲ್ಲಿದ್ದಾರೆ…? ಎ. ನಾರಾಯಣಸ್ವಾಮಿ

---Advertisement---

 

ಸುದ್ದಿಒನ್, ಹಿರಿಯೂರು, ಡಿಸೆಂಬರ್. 18 : ಶಿಕ್ಷಕರಿಗೆ ಮೋಸ ಮಾಡಿ ಜಾತಿ ಹೆಸರನ್ನು ಬಳಸಿ, ಹಣ ಹಂಚಿ ಗೆದ್ದಿರುವ ಎಂಎಲ್ಸಿ ಎಲ್ಲಿದ್ದಾರೆ ಎಂದು ಹುಡುಕುವ ಪರಿಸ್ಥಿತಿ ಇದೆ‌ ಮಾಜಿ ವಿಧಾನ ಪರಿಷತ್ ಸದಸ್ಯ ಎ. ನಾರಾಯಣಸ್ವಾಮಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಲ್ಲಿನ ಎಂಎಲ್ ಸಿ ಇಲ್ಲಿಯವರೆಗೆ ಎಷ್ಟು ಶಾಲೆಗಳಿಗೆ ಭೇಟಿ ಕೊಟ್ಟಿದ್ದಾರೆ, ಎಷ್ಟು ಸಲ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದಾರೆ, ಎಷ್ಟು ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ, ಏನು ಕೆಲಸ ಮಾಡಿದ್ದಾರೆ ಎಂಬುದರ ಲೆಕ್ಕ ಕೊಡಬೇಕು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಕ್ಷಕರು ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಬಳಕ್ಕೂ ಅಧಿಕಾರಿಗಳ ಕಾಲಿಗೆ ಬೀಳುವ ಪರಿಸ್ಥಿತಿ ಇದೆ. ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡುವ ಶಿಕ್ಷಕರಿಗೆ ಪಠ್ಯೇತರ ಚಟುವಟಿಕೆಗಳೇ ಹೆಚ್ಚಾಗಿವೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಶಿಕ್ಷಕರಿಗೆ ಪದವೀಧರರಿಗೆ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಪಿಯು, ಹೈಸ್ಕೂಲ್ ನಲ್ಲಿ ಒಂದು ಹುದ್ದೆಯು ಭರ್ತಿಯಾಗಿಲ್ಲ. ಎನ್ ಪಿಎಸ್ ತೆಗೆದು ಓಪಿಎಸ್ ಕೊಡುವುದಾಗಿ ಮರುಳು ಮಾಡಿದರು. ಇದೇ ರೀತಿ ಇನ್ನೂ ಎಷ್ಟು ದಿನ ಶಿಕ್ಷಕರನ್ನು ವಂಚಿಸುತ್ತೀರಿ. ಕನ್ನಡ ಬಾರದ ಮಂತ್ರಿ ಇಟ್ಟುಕೊಂಡು ಏನು ಸಾಧಿಸುತ್ತೀರಿ. ಈ ಬಗ್ಗೆ ಶಿಕ್ಷಕರಿಗೆ ಉತ್ತರ ಕೊಡಲೇಬೇಕು ಎಂದು ಆಗ್ರಹಿಸಿದರು.

ನಂತರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮಾತನಾಡಿದ ಅವರು ನನಗೆ ಕಳೆದ 40 ವರ್ಷಗಳ ರಾಜಕೀಯ ಅನುಭವವಿದೆ. ಶಾಸಕರಾಗಿ, ವಿಧಾನ ಪರಿಷತ್ ಸದಸ್ಯನಾಗಿ, ಸಿಂಡಿಕೇಟ್ ಸದಸ್ಯನಾಗಿ, ಕಾಲೇಜಿನ ಅನುಭವ ಉಪನ್ಯಾಸಕನಾಗಿ, ಕಾಲೇಜು ಕಮಿಟ್ಟಿಗಳಲ್ಲಿ ಅಧ್ಯಕ್ಷನಾಗಿ ಸೇವೆಯ ಅನುಭವ ಇದೆ. ನಾವು ರಾಜಕೀಯದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ದೇಶದ ಭವಿಷ್ಯದ ಮೇಲಿರುತ್ತದೆ. ಯಾವ ದೇಶದಲ್ಲಿ ರಾಜಕೀಯ ವ್ಯವಸ್ಥೆ ಗಟ್ಟಿಯಾಗಿರುತ್ತದೆ ಅಲ್ಲಿ ದೇಶ ಅಭಿವೃದ್ಧಿ ಹೊಂದುತ್ತದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಾದಾಟ ನಡೆಸುತ್ತಿದ್ದು ಕಳೆದ ಮೂರು ತಿಂಗಳುಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ ಯಾವುದೇ ಜನಪರ ಕೆಲಸಗಳು ಆಗಿಲ್ಲ. ಆಗಾಗಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯವಾಗಿದೆ. ಮುಂಬರುವ ಆಜ್ಞೆಯ ಪದವೀಧರ ಕ್ಷೇತ್ರದ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಮಂಡಲ ಅಧ್ಯಕ್ಷ ವಿಶ್ವನಾಥ್, ಮುಖಂಡರಾದ ದ್ಯಾಮಣ್ಣ, ಸೋಮಣ್ಣ, ರಾಘವೇಂದ್ರ, ಕೇಶವಮೂರ್ತಿ, ಜೆಬಿ. ರಾಜು, ಬಸವರಾಜ್ ನಾಯಕ, ವೆಂಕಟೇಶ್, ಮಂಜುಳ, ಸಿದ್ದಮ್ಮ, ನಿತೀನ್ ಗೌಡ, ಯೋಗೇಶ್, ಮಂಜುನಾಥ್, ಹನುಮಂತ್, ಪ್ರಜ್ವಲ್, ರಂಗಸ್ವಾಮಿ, ವೇದಮೂರ್ತಿ, ಯಶೋಧರ್, ವಾಸುದೇವ, ಪಾರ್ಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now