Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮೀ ಹಣದ ಬಗ್ಗೆ ಬಿಜೆಪಿಯವರ ಆರೋಪಕ್ಕೆ ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಮೈಸೂರು: ಈ ಬಾರಿಯ ಚಳಿಗಾಲದ ಅಧಿವೇಶನದ ಕೊನೆಯ ದಿನದಲ್ಲಿ ಗೃಹಲಕ್ಷ್ಮೀ ಯೋಜನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದರಲ್ಲೂ ಬಿಜೆಪಿ ನಾಯಕರು ಐದು ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಗುಡುಗಿದ್ದರು. ಈ ಸಂಬಂಧ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಫೆಬ್ರವರಿ – ಮಾರ್ಚ್ ತಿಂಗಳ ಹಣ ಬಿಡುಗಡೆಯಾಗಿಲ್ಲ. ಪರಿಶೀಲನೆ ಮಾಡಿ ಬಿಡುಗಡೆ ಮಾಡ್ತೀವಿ. ಬಿಜೆಪಿ ಟಾರ್ಗೆಟ್ ಏನು. ಹಣ ಅವರು ಕೊಡುತ್ತಾ ಇದ್ದಾರಾ..? ನಾವೂ ಇಲ್ಲಿವರೆಗೆ ಸುಮಾರು 23 ತಿಂಗಳು ಕೊಟ್ಟಿದ್ದೀವಿ. ಹಣ ಇಲ್ಲದೆ ಇಲ್ಲಿಯವರೆಗೂ ಕೊಡುವುದಕ್ಕೆ ಆಗುತ್ತಾ..? ಹೇಗೆ ಆ ಹಣವನ್ನ ಲಪಟಾಯಿಸೋದಕ್ಕೆ ಸಾಧ್ಯ. ಅವರ ಅಕೌಂಟ್ ಗೆ ಹೋಗುವುದು ಹೇಗೆ ಲಪಟಾಯಿಸೋದಕ್ಕೆ ಸಾಧ್ಯ. ಯಾರೂ ಆ ಹಣವನ್ನ ತೆಗೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆ ಹಣ ಬಿಡುಗಡೆಯೇ ಆಗಿಲ್ಲ ಎಂದಿದ್ದಾರೆ.

ಇದೇ ವೇಳೆ ಪ್ರಚೋದನಕಾರಿ ಭಾಷಣ ಬಗ್ಗೆ ಮಾತನಾಡಿ, ಯಾರೂ ಪ್ರಚೋದನಕಾರಿ ಭಾಷಣ ಮಾಡುತ್ತಾರೆ ಅವರೇ ಇದನ್ನೆಲ್ಲ ವಿರೋಧಿಸುವುದು. ಪ್ರಚೋದನಕಾರಿ ಭಾಷಣ ಮಾಡದೆ ಹೋದರೆ ನಿಮ್ಮ ಮೇಲೆ ಯಾಕೆ ಸುಮ್ಮ ಸುಮ್ಮನೆ ಕೇಸ್ ಹಾಕ್ತೀವಿ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಅಂದಾಜ್ಷಣ ಯಾಕೆ ಹೆಗಲು ಮುಟ್ಟಿನೋಡಕೊಳ್ಳಬೇಕು. ಇದು ಎಲ್ಲರಿಗೂ ಅನ್ವಯವಾಗುತ್ತದೆ. ನಮ್ಮ ಪಕ್ಷದವರು ಮಾಡಿದ್ರು, ಬಿಜೆಪಿ, ಜೆಡಿಎಸ್ ನವರು ಮಾಡಿದ್ರು ಎಲ್ಲರಿಗೂ ಅನ್ವಯವಾಗುತ್ತದೆ. ಈ ರೀತಿಯ ಭಾಷಣದಿಂದ ಶಾಂತಿ ನೆಲೆಸುತ್ತದಾ..? ಬಿಜೆಪಿಯವರು ಪ್ರಚೋದನಾ ಭಾಷಣಾ ಮಾಡುತ್ತಾ ಇದ್ದಾರೆ ಎಂದೇ ಅರ್ಥ ಎಂದು ಪ್ರಚೋದನಕಾರಿ ಭಾಷಣಕ್ಕೆ ಕಡಿವಾಣ ಹಾಕಿದ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಕ್ಲಾರಿಟಿ ಕೊಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now