Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವೇಷ ಭಾಷಣ ಕಾಯ್ದೆ ವಿರೋಧಿಸಿ ನಾಳೆ ಪ್ರತಿಭಟನೆ : ಹೆಚ್.ಎನ್. ಲೋಕೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 23 : ಕರ್ನಾಟಕ ಸರ್ಕಾರವು ಬೆಳಗಾಂ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷವೂ ಜಾರಿ ತರಲು ಹೊರಟಿರುವ ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕದ ವಿರೋಧಿಸಿ ಡಿ.24ರ ಬುಧವಾರದಂದು ಚಿತ್ರದುರ್ಗ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಭಾರತೀಯ ಜನತಾ ಪಾರ್ಟಿಯ ಚಿತ್ರದುರ್ಗ ನಗರ ಮಂಡಲದ ಅಧ್ಯಕ್ಷರಾದ ಹೆಚ್.ಎನ್. ಲೋಕೇಶ್ ತಿಳಿಸಿದ್ದಾರೆ.

ದಿನಾಂಕ ಡಿ. 24ರ ಬೆಳಗ್ಗೆ 10:30 ಕ್ಕೆ ನಗರದ ಡಿ.ಸಿ. ಸರ್ಕಲ್‍ನಲ್ಲಿ ಕರ್ನಾಟಕ ಸರ್ಕಾರವು ಜಾರಿ ತರಲು ಹೊರಟಿರುವ ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕದ ವಿರೋಧ ವಾಗಿ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ.

ನಗರದ ಜಿಲ್ಲಾ ಪದಾಧಿಕಾರಿಗಳು ಹಾಗೂ ಮೋರ್ಚಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಿಸಬೇಕಾಗಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now