ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಹಿರಿಯೂರು, ಡಿಸೆಂಬರ್. 25 : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊಲ್ಲಡ್ಕು ಗ್ರಾಮದ ಬಳಿ ನಡೆದಿದೆ.
ರಾಷ್ಡೀಯ ಹೆದ್ದಾರಿ ಕೆ.ಆರ್ ಹಳ್ಳಿ ಗೊರ್ಲತ್ತು ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ..
ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ
ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 11 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸಿರಾ ಮತ್ತು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಅತಿವೇಗದಿಂದ ಕಂಟೈನರ್ ಲಾರಿ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಥಳಕ್ಕೆ ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



