Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು ಬಸ್ ದುರಂತ : ಮೃತಪಟ್ಟವರ ಗುರುತು ಪತ್ತೆ ; ಸಂಪೂರ್ಣ ಮಾಹಿತಿ ಇಲ್ಲಿದೆ..!

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 25 : ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಗುರುವಾರ (ಡಿಸೆಂಬರ್ 25, 2025) ಬೆಳಗಿನ ಜಾವ ಕಂಟೇನರ್ ಟ್ರಕ್, ಐಷಾರಾಮಿ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 06 ಮಂದಿ ಸಾವನ್ನಪ್ಪಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸ್ಪಷ್ಟಪಡಿಸಿದ್ದಾರೆ.

ಮೃತರ ಸಂಪೂರ್ಣ ಮಾಹಿತಿ :

1. ಎ ಎಂ ನವ್ಯಾ (26 ವರ್ಷ)
ತಂದೆ : ಎ ಎನ್ ಮಂಜಪ್ಪ,
ಮಹಾಲಕ್ಷ್ಮಿ ಲೇಔಟ್,
ಚನ್ನರಾಯಪಟ್ಟಣ, ಹಾಸನ ಜಿಲ್ಲೆ.

2. ಎಚ್ ಸಿ ಮಾನಸ (27 ವರ್ಷ)
ತಂದೆ : ಚಂದ್ರೇಗೌಡ ಸಿ ವಿ,
ಚನ್ನರಾಯಪಟ್ಟಣ, ಹಾಸನ ಜಿಲ್ಲೆ

3. ರಶ್ಮಿ ಆರ್ ಮಹಾಲೆ, (24 ವರ್ಷ)
ತಂದೆ : ರತ್ನಾಕರ್ ಮಹಾಲೆ, ಶಿರಾಲಿ ಗ್ರಾಮ,
ಭಟ್ಕಳ ತಾ. ಉತ್ತರ ಕನ್ನಡ ಜಿಲ್ಲೆ

4.ಬಿಂದು, ಗೃಹಿಣಿ, (29 ವರ್ಷ)
ಗಂಡ : ದರ್ಶನ್, ಗಿರಿನಗರ ಬೆಂಗಳೂರು

5. ಗ್ರೇಯಾ, (05 ವರ್ಷ)
ಬಿಂದು ಮತ್ತು ದರ್ಶನ್ ದಂಪತಿಗಳ ಮಗಳು, ಗಿರಿನಗರ ಬೆಂಗಳೂರು.

6. ಕುಲದೀಪ್ – ಟ್ರಕ್ ಚಾಲಕ, ಉತ್ತರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ದೃಡಪಡಿಸಿವೆ.

ಅಪಘಾತಕ್ಕೆ ಒಳಗಾದ ಬಸ್ ಸೀಬರ್ಡ್ ಟೂರಿಸ್ಟ್ ಗೆ ಸಂಬಂಧಿಸಿದ ಬಸ್ಸಿನಲ್ಲಿ ಓರ್ವ ಡ್ರೈವರ್, ಓರ್ವ ಕ್ಲೀನರ್ ಸೇರಿದಂತೆ ಒಟ 33 ಜನರು ಪ್ರಯಾಣಿಸುತ್ತಿದ್ದು, ಈ ಅಪಘಾತದಿಂದಾಗಿ ಐವರು ಪ್ರಯಾಣಿಕರು ಮೃತಪಟ್ಟಿದ್ದು, 28 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆ, ಶಿರಾ ಸರ್ಕಾರಿ ಆಸ್ಪತ್ರೆ, ಶಿರಾ ಖಾಸಗಿ ಆಸ್ಪತ್ರೆ ಮತ್ತು ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now