Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರಿನ ಅಂಬಾ ವಿಲಾಸ ಅರಮನೆ ಬಳಿ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ…!

---Advertisement---

 

 

ಸುದ್ದಿಒನ್, ಮೈಸೂರು, ಡಿಸೆಂಬರ್. 25 : ಅದ್ಯಾಕೋ ಇವತ್ತಿನ ದಿನವೇ ಸರಿಯಿಲ್ಲ. ಬೆಳಿಗ್ಗೆ ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ, ರಾತ್ರಿ ಮೈಸೂರಿನಲ್ಲಿ ಸ್ಪೋಟವಾಗಿದೆ. ಮೈಸೂರು ಅಂಬಾ ವಿಲಾಸ ಅರಮನೆಯ ಹೊರಗೆ ಗುರುವಾರ ಸ್ಫೋಟ ಸಂಭವಿಸಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ.

ಅರಮನೆಯ ಮುಂಭಾಗದ ಜಯಚಾಮರಾಜೇಂದ್ರ ಗೇಟ್‌ನ ಬಳಿ ಈ ಘಟನೆ ನಡೆದಿದೆ. ಇಲ್ಲಿ ಓರ್ವ ಹೀಲಿಯಂ ಬಲೂನು ಮಾರಾಟ ಮಾಡುತ್ತಿದ್ದರು. ಸೈಕಲ್‌ನಲ್ಲಿ ಬಲೂನ್ ಮಾರುತ್ತಿದ್ದಾಗ ಬಲೂನ್ ಗೆ ಗ್ಯಾಸ್ ತುಂಬುವಾಗ ರಾತ್ರಿ 8.30 ರ ವೇಳೆಗೆ ಸಿಲಿಂಡರ್ ಸ್ಪೋಟವಾಗಿದೆ. ಬಲೂನ್ ಮಾರುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.

 

ಮೃತರ ಗುರುತು ಪತ್ತೆಯಾಗಿಲ್ಲ. ಆದರೆ ಅಲ್ಲಿದ್ದ ನಾಲ್ವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕಲ್ಕತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಎಂದು ಗುರುತಿಸಲಾಗಿದೆ.

 

ಘಟನೆ ಸಂಭವಿಸುತ್ತಿದ್ದಂತೆ ಮೈಸೂರಿನ ಕೃಷ್ಣರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲ ಕ್ಷಣಗಳ ಕಾಲ ಈ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅವಘಡದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯರ ನೆರವಿನೊಂದಿಗೆ ಕೆ.ಆರ್ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now