Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈಲ್ವೆ ಟಿಕೆಟ್ ದರ ಏರಿಕೆ : ಬಿಜೆಪಿಯವರಿಗೆ ಸಿಎಂ ಸಲಹೆ ಏನು..?

---Advertisement---

ದಾವಣಗೆರೆ: ಈಚೆಗಷ್ಟೆ ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರವನ್ನ ಏರಿಕೆ ಮಾಡಿದೆ. ಈ ಸಂಬಂಧ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆಯೊಂದನ್ನ ನೀಡಿದ್ದಾರೆ. ರೈಲ್ವೆ ಪ್ರಯಾಣ ದರವನ್ನ ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ಆಗಿರುವ ಈ ಹೊರೆಯನ್ನ ಬಿಜೆಪಿ ಮುಖಂಡರು ಪ್ರಶ್ನೆ ಮಾಡಲಿ ಎಂದಿದ್ದಾರೆ.

 

ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನ್ನಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧವಷ್ಟೇ ಮಾತನಾಡುವ ಬಿಜೆಪಿ ನಾಯಕರು, ರೈಲ್ವೆ ಪ್ರಯಾಣ ದರ ಏರಿಕೆಯಿಂದ ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಬೇಕು ಎಂದು ಕೇಳಿದ್ದಾರೆ.

ಇನ್ನು ಚಿತ್ರದುರ್ಗದ ಬಸ್ ಆಕ್ಸಿಡೆಂಟ್ ಬಗ್ಗೆ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಬಸ್ ಅಗ್ನಿ ದುರಂತದಲ್ಲಿ ಲಾರಿ ಚಾಲಕನ ತಪ್ಪು ಇರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ತನಿಖೆ ಪೂರ್ಣಗೊಂಡ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನು ಕುರ್ಚಿ ಪೈಪೋಟಿ ಬಗ್ಗೆ ಎಲ್ಲರಿಗೂ ಕುತೂಹಲವಂತು ಇದ್ದೆ ಇದೆ. ಈ ಪೈಪೋಟಿ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಸಿಎಂ ಕುರ್ಚಿ ಬಿಟ್ಟು ಬೇರೆ ವಿಚಾರಗಳೇ ಇಲ್ಲ ಎಂದು ಸ್ವಲ್ಪ ಗರಂ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಇದೇ ವೇಳೆ ನಾಳೆ ದೆಹಲಿಗೆ ಹೋಗುತ್ತಿರುವ ಬಗ್ಗೆಯೂ ಮಾತನ್ನಾಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ವರಿಷ್ಠರು ಕರೆದಿದ್ದಾರೆ. ಶನಿವಾರ ನಡೆಯುವ ಸಭೆಗೆ ಶುಕ್ರವಾರ ಸಂಜೆ ದೆಹಲಿಗೆ ಹೊರಟಿದ್ದೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now