Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ 8 ಅಂಚೆ ಕಛೇರಿಗಳ ಕಟ್ಟಡ ನಿರ್ಮಾಣಕ್ಕಾಗಿ ರೂ.3.40 ಕೋಟಿ ಅನುದಾನ ಬಿಡಗಡೆ : ಸಂಸದ ಗೋವಿಂದ ಎಂ.ಕಾರಜೋಳ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ಜಿಲ್ಲೆಯ 8 ಗ್ರಾಮಗಳಲ್ಲಿ ಅಂಚೆ ಕಛೇರಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ರೂ.3.40 ಕೋಟಿ ಅನುದಾನವನ್ನು ಕೇಂದ್ರ ಸಂವಹನ ಸಚಿವಾಲಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಜಿಲ್ಲೆಯ ದೊಡ್ಡ ದೊಡ್ಡ ಗ್ರಾಮಗಳಲ್ಲಿ ಅಂಚೆ ಕಛೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತದ್ದವು, ಇದನ್ನು ಮನಗಂಡು ಅಂಚೆ ಕಛೇರಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಸ್ಥಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಯನ್ನು ಅನುಮೋದಿಸಿ ಕೇಂದ್ರ ಸಂವಹನ ಖಾತೆ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ರವರು ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ಹಿರಿಯೂರು ತಾಲ್ಲೂಕು ಆದಿವಾಲ ಗ್ರಾಮದಲ್ಲಿ ಬಿ.ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.50.00 ಲಕ್ಷ, ಚಿತ್ರದುರ್ಗ ತಾಲ್ಲೂಕು ಭೀಮಸಮುದ್ರ ಗ್ರಾಮದಲ್ಲಿ ಸಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.35.00 ಲಕ್ಷ, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.45.00 ಲಕ್ಷ, ಚಿತ್ರದುರ್ಗ ತಾಲ್ಲೂಕು ಓಬಳಾಪುರ ಗ್ರಾಮದಲ್ಲಿ ಸಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.37.00 ಲಕ್ಷ, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.44.00 ಲಕ್ಷ, ಮೊಳಕಾಲ್ಮೂರು ತಾಲ್ಲೂಕು ಕೊಂಡ್ಲಹಳ್ಳಿ ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.48.00 ಲಕ್ಷ, ಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.45.00 ಲಕ್ಷ, ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿ ಸಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ರೂ.36.00 ಲಕ್ಷ ಹೀಗೆ ಒಟ್ಟು ರೂ.3.40 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಲಾಗಿದೆ.

ಶೀಘ್ರದಲ್ಲಿ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಧಿಕಾರಿಗಳು ಸಂಸದರು ಸೂಚನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now