Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ. 30 ಕ್ಕೆ ಕಲ್ಟ್ ಚಿತ್ರ ತಂಡ ಡಿ.30 ರಂದು ಚಿತ್ರದುರ್ಗಕ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್. 28 : ಕಲ್ಟ್ ಚಿತ್ರದ ನಾಯಕ ನಟ ಜೈದ್‍ಖಾನ್ ಹಾಗೂ ತಂಡವರು ಡಿ.30 ರಂದು ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅಂದು ಸಂಜೆ ಐದು ಗಂಟೆಗೆ ಕನಕ ವೃತ್ತದಲ್ಲಿ ಸ್ವಾಗತಿಸಿ ಬೈಕ್‍ರ್ಯಾಲಿ ಮೂಲಕ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣಕ್ಕೆ ಕರೆತರಲಾಗುವುದೆಂದು ರಾಜ್ಯ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಕೆ.ಅನ್ವರ್‍ಪಾಷ ತಿಳಿಸಿದರು.

ಟೌನ್ ಕ್ಲಬ್‍ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಬಿ.ಝಡ್. ಜಮೀರ್ ಅಹಮದ್‍ಖಾನ್‍ರವರ ಪುತ್ರ ಜೈದ್‍ಖಾನ್ ನಟಿಸಿರುವ ಚಿತ್ರ ಜ.23 ರಂದು ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಚಿತ್ರ ತಂಡ ಡಿ.30 ರಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಮನೋರಂಜನಾ ಕಾರ್ಯಕ್ರಮವಿರುತ್ತದೆ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ಹಿರಿಯೂರಿನ ಮಾರಿಕಣಿವೆ, ಚಿತ್ರದುರ್ಗದ ಬೆಟ್ಟದಲ್ಲಿ ಕಲ್ಟ್ ಚಿತ್ರದ ಚಿತ್ರೀಕರಣವಾಗಿದೆ. ಇಲ್ಲಿ ಯಾವುದೆ ಜಾತಿ ಭೇದವಿಲ್ಲ. ಕಲೆಗೆ ಪ್ರೋತ್ಸಾಹಿಸಲಾಗುವುದು. ಉತ್ತಮ ಅಭಿನಯವಿರುವವರಿಗೆ ಎಲ್ಲರ ಸಹಕಾರ ಮುಖ್ಯ ಎಂದು ಮನವಿ ಮಾಡಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡುತ್ತ ಕಲ್ಟ್ ಎಂದರೆ ಅನುರಾಗ ಪ್ರೇಮ. ಚಿತ್ರದುರ್ಗದಲ್ಲಿ ಶೂಟಿಂಗ್ ಮಾಡಿದರೆ ಚಿತ್ರ ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆಯಿಂದ ಇಲ್ಲಿ ಚಿತ್ರೀಕರಣವಾಗಿದೆ ಎಂದರು.

ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿ ಗೆಲುವಿನ ಸಂಕೇತ ಹಲಗೆ ಬಾರಿಸುವ ಮೂಲಕ ಡಿ.30 ರಂದು ನಟ ಜೈದ್‍ಖಾನ್ ಹಾಗೂ ತಂಡದವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಕಲಾವಿದರಿಗೆ ಚಿತ್ರದುರ್ಗದ ಜನ ಯಾವಾಗಲು ಪ್ರೋತ್ಸಾಹಿಸುತ್ತಾರೆ. ಅದೇ ರೀತಿ ಕಲ್ಟ್ ಚಿತ್ರದ ತಂಡದವರಿಗೂ ಪ್ರೋತ್ಸಾಹಿಸಿ ಚಿತ್ರದ ಯಶಸ್ವಿಗೆ ಕಾರಣರಾಗಬೇಕೆಂದು ವಿನಂತಿಸಿದರು.

ದಲಿತ ಮುಖಂಡ ಬಾಳೆಕಾಯಿ ಶ್ರೀನಿವಾಸ್ ಮಾತನಾಡುತ್ತ ಕಲ್ಟ್ ಚಿತ್ರದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ ಎಂದು ಕೋರಿದರು.
ಹನೀಸ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಕಿರಣ್‍ಕುಮಾರ್, ಕುಂಚಿಗನಹಾಳ್ ಮಹಾಲಿಂಗಪ್ಪ, ರಾಜಣ್ಣ, ಲಕ್ಷ್ಮಿನಾರಾಯಣ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now