Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತ ಸೇವಾದಳ ಯುವ ಜನರಲ್ಲಿ ರಾಷ್ಟ್ರಪ್ರೇಮ ಬೆಳೆಸುವ ಸಂಘಟನೆ : ನರೇನಹಳ್ಳಿ ಅರುಣ್‍ಕುಮಾರ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿ-29: ಭಾರತ ಸೇವಾದಳ ಸ್ವತಂತ್ರ ಹೊರಾಟದ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟಮಾಡಿದಂತಹ ಗಟ್ಟಿ ಸಂಘಟನೆಯಾಗಿದ್ದು, ಅದು ಈಗ ಅಸ್ತಿತ್ವಕ್ಕೆ ಬಂದು ಎಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿದ್ದು, ಯುವಜನರಲ್ಲಿ ರಾಷ್ಟ್ರಪ್ರೇಮ ಬೆಳೆಸಿದ ದೇಶ ಭಕ್ತ ಸಂಘಟನೆಯಾಗಿದೆ ಎಂದು ಜಿಲ್ಲಾ ಸೇವಾದಳದ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್‍ಕುಮಾರ್ ಹೇಳಿದರು.

ಮದಕರಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲ ಆಯೋಜಿಸಲಾಗಿದ್ದ ಸೇವಾದಳ ಸಪ್ತಾಹ ಮತ್ತು ಅಮೃತ ಮಹೋತ್ಸವ ಹಾಗೂ ಮಕ್ಕಳ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತ ಸೇವಾದಳ ಸಪ್ತಾಹದ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿ ನೈಜ ರಾಷ್ಟ್ರ ಪ್ರೇಮವನ್ನು ಬೆಳೆಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶ ಭಕ್ತಿಯನ್ನು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಭಾರತ ಸೇವಾದಳದ ವಲಯ ಸಂಘಟಕರಾದ ಅಣ್ಣಯ್ಯ ಅವರು ಮಾತನಾಡಿ, ಸೇವಾದಳ ಸಪ್ತಾಹದ ಅಂಗವಾಗಿ ಮಕ್ಕಳಲ್ಲಿ ಯೋಗ ಶಿಕ್ಷಣ, ರಾಷ್ಟ್ರಧ್ವಜ ತರಬೇತಿ, ಸೇವಾದಳದ ಕಾರ್ಯ ಯೋಜನೆಗಳ ಬಗ್ಗೆ ಜನರಲ್ಲಿ ಮತ್ತು ಮಕ್ಕಳಲ್ಲಿ ಬೆಳೆಸುವಂತಹ ಕೆಲಸ ಕಾರ್ಯಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.

ದೇಶ ಭಕ್ತಿ ಗೀತಗಾಯನ, ಆಶುಭಾಷಣ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರ ಕುರಿತು ವೇಷಭೂಷಣ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದ್ದು, ಆ ಮೂಲಕ ಸೇವಾದಳದ ಕಾರ್ಯಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಿಗೂ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಭಾರತ ಸೇವಾದಳದ ತಾಲ್ಲೂಕು ಸಂಘಟಕರಾದ ಮೆಹಬೂಬಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಖಜಾಂಚಿ ಶಿವಣ್ಣ, ಶಾಲಾ ಮುಖ್ಯೋಪಾಧ್ಯಾಯರಾದ ರೇಖಾ ಮತ್ತು ಶಾಲಾ ಶಿಕ್ಷಕರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now