2-3 ತಿಂಗಳಲ್ಲಿ ಜಿಲ್ಲಾ, ಪಂಚಾಯತ್ ಚುನಾವಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

1 Min Read

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿಯ ಚುನಾವಣೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮುಂದಿನ ಎರಡ್ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಬೇಕಿದೆ. ಅದರಲ್ಲೂ ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ, ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗುತ್ತದೆ ಎಂದಿದ್ದಾರೆ.

ಎಲ್ಲಾ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರುಗಳು ಅಡಿಪಾಯ ಹಾಕಲು ಕಾಯಲು ಹೋಗಬೇಡಿ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಎಲ್ಲಾ ಕಾಂಗ್ರೆಸ್ ಭವನಗಳ ಅಡಿಪಾಯಗಳಿಗೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲಾ ತಯರಿಗಳನ್ನು ಈಗಲೇ ಮಾಡಿಕೊಳ್ಳಬೇಕು. ಮಹಾತ್ಮಗಾಂಧಿ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಇಂದಿಗೆ 10 ವರ್ಷವಾಗಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೆವು. ಇಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವ ಕೆಲಸ ಆಗುತ್ತಿದೆ.

ನಿನ್ನೆ ನಡೆದ CWC ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ನೀಡುವ ಮನರೇಗಾ ಯೋಜನೆಯನ್ನು ತಂದಿತ್ತು‌. ಬಿಜೆಪಿ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿಕೊಳ್ಳುವ ಬದಲಾವಣೆ ತಂದಿದ್ದಾರೆ. ಬರಗಾಲ ಪ್ರದೇಶಕ್ಕೆ ವರ್ಷದಲ್ಲಿ 150 ಮಾನವ ದಿನಗಳ ಉದ್ಯೋಗ ನೀಡಲು ಕಾನೂನಿನಲ್ಲಿ ಸೂಚಿಸಲಾಗಿದೆ. ಆದರೆ ಅವರು ನಮ್ಮ ರಾಜ್ಯಕ್ಕೆ ಬರಗಾಲ ಇದ್ದಾಗಲೂ ನೀಡಲಿಲ್ಲ, ಕೋವಿಡ್ ಟೈಮ್ ನಲ್ಲೂ ನೀಡಿಲ್ಲ ಎಂದು ತಿಳಿಸಿದ್ದಾರೆ.

Share This Article