Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ವಿಷ್ಣು ದೇವಸ್ಥಾನದಲ್ಲಿ 2ನೇ ವರ್ಷದ ವೈಕುಂಠ ಏಕಾದಶಿ ಸಂಭ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 30 :
ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ಇರುವ ಶ್ರೀ ವಿಷ್ಣು ದೇವಸ್ಥಾನದಲ್ಲಿ  ಮಂಗಳವಾರ 2ನೇ ವರ್ಷದ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮ ಬೆಳಿಗ್ಗೆ ಪೂಜೆ ನೆರವೇರಿತು

ಈ ಸಂದರ್ಭದಲ್ಲಿ ವಿಷ್ಣು ದೇವರಿಗೆ ಅಭಿಷೇಕ ಹೂವಿನ ಅಲಂಕಾರ ಸ್ವಾಮಿಯವರ ಪ್ರಕಾರೋತ್ಸವ ಉತ್ತರ ಬಾಗಿಲು ಪೂಜೆ ಅಲಂಕಾರ ಸೇವೆ ಏರ್ಪಡಿಸಲಾಯಿತು. ಪೂಜೆಯ ನೇತೃತ್ವವನ್ನು ಸತೀಶ್ ಶರ್ಮಾ ಮತ್ತು ಸಂಗಡಿಗರಿಂದ ಪೂಜೆ ಮಾಡಲಾಯಿತು

ಈ ಸಂದರ್ಭದಲ್ಲಿ ಬೆಳ್ಳಿ ಪಲ್ಲಕ್ಕಿಯಲ್ಲಿ ದೇವರ ವಿಗ್ರಹವನ್ನು ಇಟ್ಟು ದೇವಸ್ಥಾನಗಳ ಸುತ್ತಲೂ ಪ್ರದಕ್ಷಣೆ ಮಾಡಲಾಯಿತು . ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ಸ್ವಾಮಿಯ ದರ್ಶನ ಪಡೆದು  ಪ್ರಸಾದವನ್ನು ಸ್ವೀಕರಿಸಿದರು.

ಕರ್ನಾಟಕ ಅಯ್ಯಪ್ಪ ಸ್ವಾಮಿ ಅನ್ನ ಪ್ರಸಾದದ ಅಧ್ಯಕ್ಷರಾದ ಶರಣ್ ಕುಮಾರ್  ಹಾಗೂ ಕಾರ್ಯದರ್ಶಿಯಾದ ಎಮ್ ಪಿ ವೆಂಕಟೇಶ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಬಿ ಎಸ್ ಮೋಹನ್ ಕುಮಾರ್, ಬಾಲಾಜಿ ಜಗದೀಶ್ ಗುಡ್ಡದ ಮಲ್ಲಪ್ಪ, ಇಂದ್ರಣ್ಣ, ಸೂರಪ್ಪ, ರೇಷ್ಮೆ ಮಂಜುನಾಥ್ ರಮೇಶ್ ಹಾಗೂ ರಮೇಶ್ ಗುರುಸ್ವಾಮಿ ಉಪಸ್ಥಿತರಿದ್ದರು , ಸಂಜೆ ತನಕ ನಗರದ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...