Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

---Advertisement---

ಸುದ್ದಿಒನ್ ಚಿತ್ರದುರ್ಗ: ಅಕ್ರಮ ಬೆಟ್ಟಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿದ್ದ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ಜಾಮೀನು ಲಭ್ಯವಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕಳೆದ ನಾಲ್ಕು ತಿಂಗಳಿನಿಂದ ಜೈಲಿನಲ್ಲಿ ಇದ್ದಂತ ವೀರೇಂದ್ರ ಪಪ್ಪಿ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ.

 

ಇಡಿ ಅಧಿಕಾರಿಗಳ ದಾಳಿ ಬಳಿಕ ವೀರೇಂದ್ರ ಪಪ್ಪಿ ಅವರನ್ನು ಪೊಲೀಸರು ಬಂಧಿಸಿದ್ದರು. ಜಾಮೀನು ಕೋರಿ ವೀರೇಂದ್ರ ಪಪ್ಪಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿ,‌ ಆದೇಶ ಹೊರಡಿಸಿದೆ.

ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಿದ್ದರು. ದಾಳಿ ನಡೆಸಿದ ಬಳಿಕ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದನ್ನು ಜಪ್ತಿ ಮಾಡಲಾಗಿತ್ತು. ಆ ಸಂಬಂಧ ಇಡಿ ಅಧಿಕಾರಿಗಳು ಅಧಿಜೃತವಾಗಿ ಪ್ರಕಟಣೆ ಹೊರಡಿಸಿತ್ತು. ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣದ ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್‌ ಮಾಡಲಾಗಿದೆ. ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ, ಏನೆಲ್ಲಾ ವಶಪಡಿಸಿಕೊಂಡರು ಎಂದು ಬಹಿರಂಗಪಡಿಸಿದಾಗಲೇ ಗೊತ್ತಾಗಿದ್ದು ಶಾಸಕ ವೀರೇಂದ್ರ ಪಪ್ಪಿ ಎಷ್ಟು ಕುಬೇರರು ಎಂಬುದು. ಕೋಟಿ ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಕೆಜಿ ಗಟ್ಟಲೆ ಬೆಳ್ಳಿ, ವಜ್ರ ವೈಡೂರ್ಯವೆಲ್ಲ ಸಿಕ್ಕಿತ್ತು. ಇದೀಗ ಆ ಕೇಸಲ್ಲಿ ಜಾಮೀನು ಸಿಕ್ಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now