Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ.15 ರಂದು ಹರಜಾತ್ರೆ : ಶ್ರೀ ವಚನಾನಂದ ಮಹಾಸ್ವಾಮಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ  ಡಿ. 31 : ದಕ್ಷಿಣಾಯಣದಿಂದ ಸೂರ್ಯ ಪಥ ಬದಲಿಸಿ ಉತ್ತರಾಯಣದ ಕಡೆಗೆ ಪ್ರವೇಶಿಸುವ ಮಕರ ಸಂಕ್ರಾಂತಿಯ ದಿನವಾದ ಜನವರಿ 15, 2026 ರಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಹರಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಹರಹರ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರು ಮಾಹಿತಿ ನೀಡಿದರು.

ಚಿತ್ರದುರ್ಗ ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯನ್ನು ನಡೆಸಿ 2026ನೇ ವರ್ಷದ ಜ. 15 ರಂದು ನಡೆಯುವ “ಹರ ಜಾತ್ರೆ” ಪ್ರಚಾರ ಪರಿಕರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು.ಶ್ರೀಗಳು ಸೂರ್ಯ ಪಥ ಬದಲಿಸುವ ಮಕರ ಸಂಕ್ರಾಂತಿಯ ಜನವರಿ 15, 2026ರ ಹರಜಾತ್ರೆ, ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿಶತಮಾನ ವಿಜಯೋತ್ಸವ ಸಮಾರೋಪ ಸಮಾರಂಭ ಹಾಗೂ ಶ್ರೀ ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 13ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ ಯೋಗಸಿಂಹಾ ಸನಾಧೀಶ್ವರ, ಹರಪೀಠಾಧ್ಯಕ್ಷ, ಪಂಚಮಸಾಲಿ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳವರ ಅಷ್ಟಮ ವಾರ್ಷಿಕ ಪೀಠಾರೋಹಣ ಸಮಾರಂಭ ಅಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಕಿತ್ತೂರು ರಾಜ್ಯವನ್ನಾಳಿದ ವೀರ ರಾಣಿ-ಕಿತ್ತೂರು ಚನ್ನಮ್ಮಾಜಿ ಅವರ ದ್ವಿ ಶತಮಾನೋತ್ಸವ ಸಂಭ್ರಮಾಚರಣೆಯ ಸವಿ ನೆನಪಿಗಾಗಿ, ಅವರ ಹೆಸರಿನಲ್ಲಿ 200 ರೂ ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರಿಂದ, ಗೌರವಿಸಿರುವ ಕೇಂದ್ರ ಸರ್ಕಾರ ಕಳೆದ ವರ್ಷ ಸಂಸತ್ ಭವನದಲ್ಲಿ 200 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಿದ್ದು ಸಂತಸದ ವಿಷಯವಾಗಿದೆ ಎಂದು ಹರಹರ ಪಂಚಮಸಾಲಿ ಗುರು ಪೀಠದ ಜಗದ್ಗುರು ವಚನಾನಂದಶ್ರೀಗಳು ಹೇಳಿದರು.

ಈ ವರ್ಷದ ಹರ ಜಾತ್ರೆಯ ನಿಮಿತ್ತ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಮಹನೀಯ ಸಾಧಕರನ್ನು ಗುರುತಿಸಿ, ಅವರುಗಳಿಗೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಶ್ರೀಗಳು ದಕ್ಷಿಣಾಯಣದಿಂದ ಸೂರ್ಯ ಪಥ ಬದಲಿಸಿ ಉತ್ತರಾಯಣದ ಕಡೆಗೆ ಪ್ರವೇಶಿಸುವ ಮಕರ ಸಂಕ್ರಾಂತಿಯ ದಿನವಾದ ಜನವರಿ 15, 2026 ರಂದು ಹರಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

2026ನೇ ವರ್ಷದ ಹರ ಜಾತ್ರೆಯ ಅಧ್ಯಕ್ಷರಾದ ಹಾವೇರಿಯ ವೈದ್ಯ ಡಾ|| ಬಸವರಾಜ ವೀರಾಪುರ ಅವರು ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿಶತಮಾನೋತ್ಸವದ ವಿಜಯೋತ್ಸವ ಸಮಾರೋಪ ಸಮಾರಂಭ ಹಾಗೂ ಲಿಂ.ಡಾ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 13ನೇ ವರ್ಷದ ಪುಣ್ಯ ಸ್ಮರಣೋತ್ಸವ, ಪೀಠಾಧೀಶ್ವರರಾದ ಯೋಗ ಸಿಂಹಾಸನಾಧೀಶ್ವರ ವಚನಾನಂದ ಶ್ರೀಗಳ ಅಷ್ಟಮ ವಾರ್ಷಿಕ ಪೀಠಾರೋಹಣ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲು ಸಕಲಸಿದ್ದತೆಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಗೋಷ್ಟಿಯಲ್ಲಿ ರಾಜ್ಯಾಧ್ಯಕ್ಷರಾದ ಸೋಮನಗೌಡ ಪಾಟೀಲರು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಜಿಲ್ಲಾ ಘಟಕ ಜಿಲ್ಲಾಧ್ಯಕ್ಷರಾದ ಜೆ.ಶಿವಪ್ರಕಾಶ. ವೀರಶೈವ ಸಮಾಜದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತವ ಸಮಾಜದ ಜಿಲ್ಲಾಧ್ಯಕ್ಷರಾಧಚ ಮಹಡಿ ಶಿವಮೂರ್ತಿ, ಆಶಾಕಲ್ಲಪ್ಪ, ಶಿವನಂದಗೌಡ ಪಾಟೀಲ್, ಬಸವರಾಜು, ಮಾಮದೇವ್, ಶಿವಕುಮಾರ್, ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...