Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಗಲಾಟೆ : ಕಾಂಗ್ರೆಸ್ ಕಾರ್ಯಕರ್ತ ಸಾವು..!

---Advertisement---

 

ಬಳ್ಳಾರಿ: ನಿನ್ನೆ ರಾತ್ರಿ ಬಳ್ಳಾರಿಯಲ್ಲಿ ದೊಡ್ಡ ಅವಘಡವೇ ನಡೆದಿದೆ. ಒಂದು ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಮಾತಿನಲ್ಲಿ ಶುರುವಾದ ಗಲಾಟೆ ಒಂದು ಪ್ರಾಣವೇ ಹೋಗುವಂತೆ ಮಾಡಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ.

ಗಲಾಟೆ ವೇಳೆ ಶಾಸಕ ಭರತ್ ರೆಡ್ಡಿ ಆಪ್ರ ಸತೀಶ್ ರೆಡ್ಡಿ ಅವರ ಖಾಸಗಿ ಗನ್ ಮ್ಯಾನ್ ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತ ಪಟ್ಟಿದ್ದಾರೆ. ಸದ್ಯ ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ನ್ಯಾಯ ವೈದ್ಯಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಮರಣೋತ್ತರ ಪರೀಕ್ಷೆ ನಡೆಯುವುದಕ್ಕೆ ಸುಮಾರು 1 ಗಂಟೆಗಳ ಕಾಲ ಆಗಬಹುದು. ಹೀಗಾಗಿ ಪೊಲೀಸ್ ಭದ್ರತೆಯನ್ನು ಒದಗಿಸಿದ್ದಾರೆ. ಈಗಾಗಲೇ ಶವಗಾರದ ಎದುರು ರಾಜಶೇಖರ್ ಕುಟುಂಬಸ್ಥರು ಬಂದಿದ್ದು, ಕಣ್ಣೀರಿಡುತ್ತಿದ್ದಾರೆ.

ಈ ಸಂಬಂಧ ಈಗಾಗಲೇ 11 ಜನರ ಮೇಲೆ ಎಫ್ಐಆರ್ ದಾಖಲಾಗಿದೆ ಬ್ರೂಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆಯನ್ನು ಸಹ ನಡೆಸಿದ್ದಾರೆ. ಜೊತೆಗೆ ಶಾಸಕ ಜನಾರ್ಧನ ರೆಡ್ಡಿ, ಸೋಮಶೇಖರ ರೆಡ್ಡಿ, ಶ್ರೀರಾಮುಲು, ದಮ್ಮೂರು ಶೇಖರ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ಆಗಿದೆ. ಗಲಾಟೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ಮಾಡಿದ್ದಾರೆ. ಈ ಘಟನೆ ಕುರಿತು ಗೃಹಸಚಿವ ಪರಮೇಶ್ವರ್ ಅವರು​​​ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now