Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಗಲಾಟೆ : ಚಾರ್ಜ್ ತೆಗೆದುಕೊಂಡಿದ್ದ ಒಂದೇ ದಿನಕ್ಕೆ ಎಸ್ಪಿ ಪವನ್ ತಲೆದಂಡ..!

---Advertisement---

 

ಬಳ್ಳಾರಿ: ನಿನ್ನೆಯೆಲ್ಲಾ ಇಡೀ ಬಳ್ಳಾರಿ ಆತಂಕದಲ್ಲಿತ್ತು. ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಒಬ್ಬನ ಪ್ರಾಣವೇ ಹೋಗಿತ್ತು. ಈ ಘಟನೆ ಹಿನ್ನೆಲೆ ಇಂದು ನಡೆಯಬೇಕಿದ್ದ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.

ನಾನು ಬಳ್ಳಾರಿಯ ಎಸ್ಪಿಯನ್ನ ಸಸ್ಪೆಂಡ್ ಮಾಡಿದ್ದೇನೆ. ಬಿಜೆಪಿ ನಾಯಕರ ಮಾತಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಎಸ್ಪಿಯನ್ನ ಅಮಾನತು ಮಾಡಿರೋದ್ಯಾಕೆ ಅಂದ್ರೆ ಅಂಥ ಪರಿಸ್ಥಿತಿಯಲ್ಲಿ ಆ ಜಾಗದಲ್ಲಿ ಇರಲಿಲ್ಲ ಎಂದಿದ್ದಾರೆ.

ಬಳ್ಳಾರಿಯ ಎಸ್ಪಿ ಪವನ್ ನೆಜ್ಜೂರು ಸೇವೆಯಿಂದ ಅಮಾನತುಗೊಂಡಿದ್ದಾರೆ. ದುರಂತ ಏನಂದ್ರೆ ನಿನ್ನೆ ಬೆಳಗ್ಗೆಯಷ್ಟೇ ಪವನ್, ಬಳ್ಳಾರಿಯ ಎಸ್ಪಿಯಾಗಿ ಚಾರ್ಜ್ ತೆಗೆದುಕೊಂಡಿದ್ದರು. ಇಂದು ಅವರನ್ನ ಸರ್ಕಾರ ಅಮಾನತು ಮಾಡಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆಯನ್ನು ನಿಯಂತ್ರಿಸಲು ವಿಫಲವಾದ ಹಿನ್ನಲೆ ಎಸ್ಪಿಯನ್ನು ಅಮಾನತು ಮಾಡಲಾಗಿದೆ.

ಬಳ್ಳಾರಿಯಲ್ಲಿ ನಿನ್ನೆ ಬೆಳಗ್ಗೆವರೆಗೂ ಶೋಭಾರಾಣಿ ಎಸ್ಪಿಯಾಗಿದ್ದರು. ಶೋಭಾರಾಣಿ ಅವರನ್ನು ಸರ್ಕಾರ ಡಿಸೆಂಬರ್ 31ರ ರಾತ್ರಿ ವರ್ಗಾವಣೆ ಮಾಡಿತ್ತು. ಅವರ ಸ್ಥಾನಕ್ಕೆ ಪವನ್ ನೆಜ್ಜೂರು ಅವರನ್ನು ನೇಮಕ ಮಾಡಿತ್ತು. ಜನವರಿ 1ರ ಬೆಳಗ್ಗೆ ಅಧಿಕಾರ ವಹಿಸಿಕೊಂಡಿದ್ದರು. ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟಲು ಹೋದಂತ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಸಾವನ್ನಪ್ಪಿದ್ದರು. ಈ ಕಾರಣದಿಂದ ಬಳ್ಳಾರಿ ಗಲಾಟೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ವಿಫಲವಾಗಿದ್ದು ಜೊತೆಗೆ ಹಿರಿಯ ಅಧಿಕಾರಿಗಳಿಗೂ ಸರಿಯಾದ ಮಾಹಿತಿ ನೀಡಿಲ್ಲ ಎಂಬ ಕಾರಣದಿಂದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ವಿರುದ್ಧ ಕ್ರಮಕ್ಕೆ ಬಳ್ಳಾರಿ ಡಿಐಜಿ ಶಿಫಾರಸು ಮಾಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now