Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೂದಿ ಮುಚ್ಚಿದ ಕೆಂಡದಂತಿರುವ ಬಳ್ಳಾರಿ : ಪೊಲೀಸರಿಂದ ಈಗಲೂ ಭದ್ರತೆ

---Advertisement---

 

ಬಳ್ಳಾರಿ: ಬ್ಯಾನರ್ ಗಲಾಟೆ ಬಳ್ಳಾರಿಯಲ್ಲಿ ಇನ್ನು ಕೂಡ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹೀಗಾಗಿಯೇ ಪೊಲೀಸರ ಬುಗಿ ಭದ್ರತೆ ಮುಂದುವರೆದಿದೆ. ಸೂಕ್ಷ್ಮ ಜಾಗದಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಿದೆ. ಇಜ ಗಲಾಟೆ, ಸಾವು ನಡೆಯದೆ ಹೋಗಿದ್ದರೆ ಇಂದು ಬಳ್ಳಾರಿ, ವಾಲ್ಮೀಕಿ ಕಾರ್ಯಕ್ರಮದಿಂದ ಕಂಗೊಳಿಸ್ತಾ ಇರ್ತಾ ಇತ್ತು. ವಾಲ್ಮೀಕಿ ಪ್ರತಿಮೆ ಅನಾವರಣಗೊಳ್ಳುತ್ತಿತ್ತು. ಗಲಭೆಯಾದ ಹಿನ್ನೆಲೆ ವಾಲ್ಮೀಕಿ ವೃತ್ತದ ಸುತ್ತಲು ಪೊಲೀಸರಿಂದ ಬಿಗಿ ಭದ್ರತೆಯನ್ನ ಒದಗಿಸಲಾಗಿದೆ.

ವಾಲ್ಮೀಕಿ ವೃತ್ತದಲ್ಲಿ ಕಾರ್ಯಕ್ರಮಕ್ಕಾಗಿ ಎಲ್ಲಾ ರೀತಿಯ ತಯಾರಿಯನ್ನ ನಡೆಸಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಾಜಕಾರಣಿಗಳು, ಪ್ರಮುಖರು ವಾಲ್ಮೀಕಿ ವೃತ್ತದಲ್ಲಿ ಸೇರ್ತಾ ಇದ್ರು. ಇದೀಗ ಕಾರ್ಯಕ್ರಮ ಮುಂದೂಡಿಕೆಯಾಗಿರುವ ಕಾರಣ ಬ್ಯಾನರ್, ಲೈಟ್ಸ್, ಬಾವುಟಗಳನ್ನು ತೆರವು ಮಾಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪೊಲೀಸರನ್ನ ನಿಯೋಜನೆ ಮಾಡಿದ್ದಾರೆ.

ಬ್ಯಾನರ್ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ನಡೆದ ಗಲಾಟೆಯಿಂದಾಗಿಯೇ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದರು. ಹೀಗಾಗಿಯೇ ಮತ್ತೆ ಯಾವುದೇ ಸಣ್ಣ ಅವಘಡವೂ ಸಂಭವಿಸಬಾರದು ಎಂಬ ಕಾರಣಕ್ಕೆ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಬಳ್ಳಾರಿಯಲ್ಲಿ ಎಲ್ಲಿ ನೋಡಿದರು ಪೊಲೀಸರು ಕಾಣಿಸುತ್ತಾ ಇದ್ದಾರೆ. ಯಾಕಂದ್ರೆ ಗಲಾಟೆಯಲ್ಲಿ ಒಬ್ಬ ಇದಾಗಲೇ ಸತ್ತಿದ್ದಾನೆ. ದ್ವೇಷ, ಕೋಪ ಎಂಬುದು ಬೇರೆ ಯಾವ ಅವಘಡಕ್ಕೂ ಕಾರಣವಾಗಬಾರದು ಎಂಬ ಮುಂದಾಲೋಚನೆಯನ್ನ ಪೊಲೀಸರು ವಹಿಸಿದ್ದಾರೆ. ರಾಜಶೇಖರ್ ರೆಡ್ಡಿ ಕುಟುಂಬಸ್ಥರು ಮಗನ ಕಳೆದುಕೊಂಡ ದುಃಖದಲ್ಲಿದ್ದಾರೆ.‌ ಅವರ ಮರಣೋತ್ತರ ಪರೀಕ್ಷೆ ವೇಳೆ ದೇಹಕ್ಕೆ ಹೊಕ್ಕಿದ್ದ ಗುಂಡನ್ನು ಹೊರ ತೆಗೆಯಲಾಗಿದೆ. ಈಗಾಗಲೇ ಅಂತ್ಯ ಸಂಸ್ಕಾರವೂ ಮುಗಿದಿದ್ದು, ಮಗನನ್ನು ಕಳೆದುಕೊಂಡ ತಾಯಿ ಅತ್ತು ಅತ್ತು ಮೌನವಾಗಿದ್ದಾರೆ. ರಾಜಶೇಖರ್ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now