Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ.ವಿ.ಸಾಗರ ಜಲಾಶಯಕ್ಕೆ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಣೆ

---Advertisement---

ಚಿತ್ರದುರ್ಗ. ಜ.04: ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಭಾನುವಾರ ಬಾಗಿನ ಅರ್ಪಣೆ ಮಾಡಿದರು.

 

ತರಹೇವಾರಿ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿ.ವಿ.ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಸಚಿವ ಡಿ.ಸುಧಾಕರ್ ಹಾಗೂ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ,  ಸೇರಿದಂತೆ ವಿವಿಧ ಗಣ್ಯರು ಪುಷ್ಪಾರ್ಚನೆ ಮಾಡಿ, ಹಾಲುತುಪ್ಪ ಸುರಿದು, ಬಾಗಿನ ಅರ್ಪಿಸಿ ಗಂಗೆಗೆ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಳೆದ 2025ರ ಜನವರಿಯಲ್ಲಿ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ತಿಂಗಳಿನಲ್ಲಿಯೇ ಮತ್ತೊಮ್ಮೆ ಜಲಾಶಯ ಭರ್ತಿಯಾಗಿತ್ತು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಜಲಾಶಯಕ್ಕೆ ಕಳೆದ ಡಿಸೆಂಬರ್ ಮಾಹೆಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲು ಪ್ರಯತ್ನ ನಡೆಸಲಾಗಿತ್ತು. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಮಯ ಅಭಾವದ ಕಾರಣ ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಬಾಗಿನ ಅರ್ಪಿಸಲಾಗಿದೆ. ಒಂದೇ ವರ್ಷದಲ್ಲಿಯೇ ಎರಡು ಬಾರಿ ವಿ.ವಿ.ಸಾಗರ ಜಲಾಶಯ ಭರ್ತಿಯಾಗಿರುವುದು ಜಿಲ್ಲೆಯ ಜನರಿಗೆ ತುಂಬಾ ಹರ್ಷ ತಂದಿದೆ ಎಂದರು.
ವಾಣಿವಿಲಾಸ ಜಲಾಶಯದ ಹಿನ್ನೀರಿನಿಂದಾಗಿ ಹೊಸದುರ್ಗ ರೈತರ ಸಮಸ್ಯೆ ಬಗೆಹರಿಸುವ ಸಂಬಂಧ ಕಳೆದ ತಿಂಗಳು ಜಿಲ್ಲೆಯ ಶಾಸಕರು ಹಾಗೂ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳು ರೂಪುರೇಷೆ ಸಿದ್ದಪಡಿಸಿದ್ದು, ವಿ.ವಿ.ಸಾಗರ ಜಲಾಶಯದ ಹಿನ್ನೀರಿನಿಂದಾಗಿ ರೈತರು ಅನುಭವಿಸುವ ತೊಂದರೆಗಳ ನಿವಾರಣೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.
ಹೊಸದುರ್ಗ ತಾಲ್ಲೂಕಿನ 920 ರೈತರಿಗೆ ಪರಿಹಾರ ವಿತರಣೆ ಮಾಡಲು ಈಗಾಗಲೇ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಕೆರೆ, ರಸ್ತೆ, ಸೇತುವೆ ರಿಪೇರಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಡಾ.ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಹೆಚ್. ಲಮಾಣಿ, ಅಧೀಕ್ಷಕ ಇಂಜಿನಿಯರ್ ಹರೀಶ್ ಕೆ.ಟಿ., ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಬಾರಿಕರ ಸೇರಿದಂತೆ ರೈತ ಮುಖಂಡರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now