ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಜನವರಿ. 05 : ನಗರದ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನನ್ನಿವಾಳ ಗ್ರಾಮದ ಯುವಕನೊಬ್ಬ ತನ್ನ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ.
ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾಹಿತಿ ತಿಳಿದು ತಕ್ಷಣವೇ 112 ಹೊಯ್ಸಳ ಪೊಲೀಸ ಸ್ಥಳಕ್ಕೆ ಆಗಮಿಸಿ ಯುವಕನನ್ನು ಆಸ್ಪತ್ರೆಗೆ ಸಾಗಿಸಲು ಆಟೋ ಚಾಲಕರನ್ನು ಕೂಗಿದಾಗ ಯಾವೊಬ್ಬ ಆಟೋ ಚಾಲಕರು ಯುವಕನ ರಕ್ಷಣೆಗೆ ಧಾವಿಸಲಿಲ್ಲ. ಆಟೋ ನಿಲ್ದಾಣದಲ್ಲಿ ಈ ಘಟನೆ ನಡೆದರೂ ಸಹ ಆಟೋ ಚಾಲಕರು ಮಾನವೀಯತೆ ತೋರದೆ ನಮಗೆ ಸಂಬಂಧ ಇಲ್ಲವಂತೆ ವರ್ತನೆ ಮಾಡಿದ್ದಾರೆ.
ಪೊಲೀಸರು ಖಾಸಗಿ ಬಸ್ ನಿಲ್ದಾಣ ಸಮೀಪ ನಿಲ್ಲಿಸಿದ ಮತ್ತೊಂದು ಆಟೋ ತಂದು ಗಾಯಗೊಂಡಿದ್ದ ಯುವಕನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ಸಾಗಿಸಿದ್ದಾರೆ.

ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ಯಾಕೆ ಎಂಬುದು ಪೊಲೀಸರ ತನಿಖೆಯ ನಂತರವೇ ತಿಳಿದು ಬರಲಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಶಿವರಾಜ್ ಪೊಲೀಸ್ ಪೇದೆಗಳದ ಚೌಹಾಣ್ ಹಾಗೂ ಸಂತೋಷ್ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















