ದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಅವರಿಗೆ ಕೆಮ್ಮು ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಮಾಲಿನ್ಯ ಕಡಿಮೆಯಾಗುವಂತೆ ಕಾಣಿಸುತ್ತಿಲ್ಲ. ಹೀಗಾಗಿ ಕೆಮ್ಮು ಕೂಡ ಕಡಿಮೆಯಾಗಿರಲಿಲ್ಲ. ಮುನ್ನೆಚ್ಚರಿಕೆಯಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಕೂಡ ಸೋನಿಯಾ ಗಾಂಧಿ ಅವರನ್ನ ತಪಾಸಣೆ ಮಾಡಿದ್ದು, ಕೆಮ್ಮು ನಿಲ್ಲಲು ಚಿಕಿತ್ಸೆ ನೀಡುತ್ತಿದ್ದಾರೆ.
ನಿನ್ನೆ ಸಂಜೆಯೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿಗೆ ಡಿಸೆಂಬರ್ ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರದ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫೆಬ್ರವರಿಯಲ್ಲಿ ಅವರ ಆಸ್ಪತ್ರೆಗೆ ಒಂದು ದಿನ ಚಿಕಿತ್ಸೆ ನೀಡಲಾಯಿತು. ಆ ಸಮಯದಲ್ಲಿ ಅವರು ಗ್ಯಾಸ್ಟ್ರೋ ಎಂಟರಾಲಜಿ ತಜ್ಞ ರ ಮೇಲ್ವಿಚಾರಣೆಯಲ್ಲಿದ್ದರು. ಜೂನ್ 19ರಂದು ಹೊಟ್ಟೆಗೆ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆದ ನಂತರ ಸೋನಿಯ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಜೂನ್ 15 ರಂದು ಹೊಟ್ಟೆಯ ಸೋಂಕುಗೆ ಒಳಗಾಗಿದ್ದರು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳಿಂದ ಗಾಂಧಿಯವರ ಮೇಲೆ ತೀವ್ರ ವೈದ್ಯಕೀಯ ನಿಗಾ ಇಡಲಾಗಿತ್ತು. ಜೂನ್ 7 ರಂದು ಕೂಡ ಕಾಂಗ್ರೆಸ್ ನಾಯಕಿ ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹೋಗಿದ್ದರು, ಕೆಲವು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಕರೆತರಲಾಗಿತ್ತು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯ ಪ್ರಧಾನ ಸಲಹೆಗಾರ (ಮಾಧ್ಯಮ) ನರೇಶ್ ಚೌಹಾಣ್ ಹೇಳಿದ್ದರು. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















