Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸಾಧನೆ ದಾಖಲೆಯ ಪುಟ ಸೇರಲಿದೆ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

---Advertisement---

ಸುದ್ದಿಒನ್, ಚಿತ್ರದುರ್ಗ. ಜ. 06. ರಾಜ್ಯದ ಇತಿಹಾಸದಲ್ಲಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಹೊಸ ದಾಖಲೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಪುಟ ಸೇರಲಿದೆ.

ರಾಜಕಾರಣದಲ್ಲಿ ಸಕ್ರಿಯವಾಗಿರುವ ಅನುಭವಿ ಜನಪ್ರತಿನಿಧಿಗಳೆಲ್ಲರಿಗೂ ಮುಖ್ಯಮಂತ್ರಿ ಹುದ್ದೆಗೇರುವ ಕನಸು ಸಹಜ. ಜೀವಮಾನದ ಈ ಕನಸನ್ನು ನನಸಾಗಿಸಿಕೊಳ್ಳವುದು ಅದೃಷ್ಟದ ಜತೆಗೆ ಸಾಹಸಮಯ ಹೋರಾಟ. ಅದರಲ್ಲೂ ಮುಖ್ಯಮಂತ್ರಿ ಹುದ್ದೆಯಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸುವುದು ಸುಲಭದ ಮಾತಲ್ಲ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಅಂತಹ ಅವಕಾಶ ಒದಗಿಬಂದಿದೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು 9 ಬಾರಿ ಶಾಸಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ, ಎರಡು ಬಾರಿ ವಿಪಕ್ಷ ನಾಯಕರಾಗಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿಗಳಾಗಿ ಹಾಗೂ ಸುದೀರ್ಘಾವಧಿಯ ಮುಖ್ಯಮಂತ್ರಿಯಾಗಿ 16 ಬಾರಿ ಆಯವ್ಯಯ ಮಂಡನೆ ಮಾಡಿ ದಾಖಲೆಯನ್ನು ನಿರ್ಮಿಸಿದ್ದಾರೆ.

ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ಮಾಡಿರುವುದು ಅತ್ಯಂತ ಸಂತಸದ ವಿಚಾರವಾಗಿದೆ. ಈ ವರೆಗೆ ಸುದೀರ್ಘ ಸಿಎಂ ಹೆಗ್ಗಳಿಗೆ ಭಾಜನರಾಗಿದ್ದ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.

ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಈಗಾಲೇ ಎಲ್ಲರಿಗಿಂತ ಮುಂದಿದ್ದು, 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ ಆಗಿದ್ದರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ಚಿತ್ರದುರ್ಗದ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...