ಬೆಂಗಳೂರು : ಇಂದಿಗೆ ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ಅವರ ದಾಖಲೆಯನ್ನ ಬ್ರೇಕ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ಈ ಅವಧಿಯಲ್ಲಿಯೇ ಸಿಎಂ ಆಗಲಿ ಅಂತ ಸಾಕಷ್ಟು ಅವರ ಬೆಂಬಲಿಗರು ಬಯಸುತ್ತಿದ್ದಾರೆ. ಅದರಲ್ಲೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಆಸೆ ಕೂಡ ಹೌದು. ಅದನ್ನ ಬಹಿರಂಗವಾಗಿಯೇ ಸಾಕಷ್ಟು ಸಲ ಹೇಳಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ದಾಖಲೆ ಬಗ್ಗೆ ಮಾತನ್ನಾಡಿ, ಡಿಕೆ ಶಿವಕುಮಾರ್ ಬಗೆಗಿನ ಆಸೆಯನ್ನು ಹೇಳಿದ್ದಾರೆ.
ಈ ಬಗ್ಗೆ ಮಾತನ್ನಾಡಿದ ಇಕ್ಬಾಲ್, ನೆಚ್ಚಿನ ನಾಯಕರು, ಅಲ್ಪಸಂಖ್ಯಾತರ ಮೇಲೆ ಕಾಳಜಿ ಇರುವ ನಾಯಕರು ಸಿದ್ದರಾಮಯ್ಯ. ಅತಿಹೆಚ್ಚು ಅವಧಿ ಸಿಎಂ ಆಗಿ ಕೆಲಸ ಮಾಡಿದ್ದಾರೆ. ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ನನ್ನ ಕ್ಷೇತ್ರದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಿಂದುಳಿದ ವರ್ಗದ ಬಗ್ಗೆ ಹೆಚ್ಚು ಚಿಂತನೆ ಮಾಡುವ ನಾಯಕ. ನಮ್ಮ ಪಕ್ಷದ ಆಸ್ತಿಯಾಗಿ ಕೆಲಸ ಮಾಡ್ತಿದ್ದಾರೆ. ಎಲ್ಲಾ ಶೋಷಿತ ವರ್ಗದ ಮೇಲೆ ವಿಶೇಷ ಕಾಳಜಿಯಿಂದ ಆಡಳಿತ ಮಾಡ್ತಿದ್ದಾರೆ. ದೇವರು ಅವರಿಗೆ ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥನೆ ಮಾಡ್ತೇನೆ ಎಂದಿದ್ದಾರೆ.
ಇನ್ನು ಇದೇ ದಿನ ಅಂದ್ರೆ ಜನವರಿ 6ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಶಾಸಕ ಇಕ್ಬಾಲ್ ಅವರು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿ, ನನ್ನದು ಎರಡು ಡೇಟ್ ಇದೆ, ಒಂದು ಜನವರಿ 6 ಇನ್ನೊಂದು ಜನವರಿ 9. ಈಗ ಜನವರಿ 6 ಮುಗಿದಿದೆ, ಇನ್ನೂ ಜನವರಿ 9 ನೇ ತಾರೀಖು ಬಾಕಿ ಇದೆ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತೆ. ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈಗಾಗಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ .
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















