ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಜನವರಿ. 07 : ಟಾಟಾ ಏಸ್ ವಾಹನದಲ್ಲಿ ಸುಮಾರು 2 ಹಸು 3 ಕರುಗಳನ್ನು ಅಕ್ರಮವಾಗಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದ ಟಾಟಾ ಎಸ್ ವಾಹನವನ್ನು ಚಳ್ಳಕೆರೆ ಪೋಲೀಸ್ ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಣೆ ಮಾಡಿ ಕುರುಡಿ ಹಳ್ಳಿ ಗೋಶಾಲೆಗೆ ಬಿಟ್ಟು ಬಂದ್ದಿದ್ದು ಇಬ್ಬರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿದ್ದಾರೆ.
ಟಾಟಾ ಏಸು ವಾಹನದಲ್ಲಿ ಅಕ್ರಮ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಾಯಕನಹಟ್ಟಿ ಕಡೆಯಿಂದ ಬಂದ ಟಾಟಾ ಏಸ್ ವಾಹನವನ್ನು ಪಿಎಸ್ ಐ ಈರೇಶ್ ತಡೆದು ಪರಿಶೀಲನೆ ಮಾಡಿದ ವೇಳೆ ವಾಹನದಲ್ಲಿ 2 ಹಸು ಹಾಗೂ 3 ಕರುಗಳು ಇರುವುದು ಕಂಡು ಬಂದಿದೆ. ವಾಹನ ಚಾಲಕ ಆಂಧ್ರ ಪ್ರದೇಶ ಮೂಲದ ರಾಜಣ್ಣಹಾಗೂ ಪಾಲಯ್ಯ ಇಬ್ಬರನ್ನೂ ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಜಾನುವಾರುಗಳ ಮಾಲೀಕರು ಚಳ್ಳಕೆರೆ ಪೋಲೀಸ್ ಠಾಣೆಗೆ ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣೆಯ ಪಿಓ ಕೆ. ಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















