ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಜನವರಿ. 08 : ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.

ತಾಲೂಕಿನ ಗೊರ್ಲೊತ್ತು ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ
ಗ್ರಾಮಸ್ಥರ – ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ.
ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ.
ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ.
ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ..
ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು
IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯಿಂದ ಎರಡು ದಿನದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ.

ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











