Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಎಲ್ಲರಿಗೂ ಅಗತ್ಯವಿದೆ : ಸಂತೋಷ್ ಕುಮಾರ ಪಿ.ಕೆ.

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 08 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಎಲ್ಲರಿಗೂ ಅಗತ್ಯವಿದೆ ಎಂದು ಅರಿವು ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಕುಮಾರ ಪಿ.ಕೆ. ಹೇಳಿದರು.

ಅವರು ನಗರದ ಸ್ಟೇಡಿಯಂ ರಸ್ತೆಯಲ್ಲಿರುವ ಪಿ.ಕೆ.ಎಸ್ ಫೌಂಡೇಷನ್ ನಲ್ಲಿ ಇಂದಿನಿಂದ (ಜನವರಿ 8 ) ಅರಿವು ಎಂಬ ಕಾರ್ಯಕ್ರಮದಡಿಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಉಚಿತವಾಗಿ 45 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಂಪ್ಯೂಟರ್ ಮಹತ್ವವನ್ನು ತಿಳಿಸುತ್ತ ಉಚಿತ ಎಂಬುದು ಹೆಸರಿಗೆ ಮಾತ್ರ ಆದರೆ ನೀವೆಲ್ಲರೂ ತಮ್ಮ ಅಮೂಲ್ಯವಾದ ಸಮಯವನ್ನು ಹೂಡಿ ಇಲ್ಲಿ ಬರುವುತ್ತಿರುವಿರಿ, ಆದುದರಿಂದ ಯಾರೂ ಕೂಡ ಉಚಿತವೆಂದು ಉದಾಸೀನ ಮಾಡದೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸದ್ದ ಹಂಪಿ ವಿಶ್ವವಿದ್ಯಾಲಯದ ‌ಸಂಶೋದನ ಮಾರ್ಗದರ್ಶಿಗಳು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರು ಡಾ. ಜಯಮ್ಮ ಮಾತನಾಡಿ ಇಂದು ಮಹಿಳೆಯರು ಎಲ್ಲಾ ವಿಭಾಗದಲ್ಲಿ ಮುಂದುವರೆಯಲು ಕಂಪ್ಯೂಟರ್ ತರಬೇತಿಯ ಅಗತ್ಯವಿದೆ. ಉಚಿತವಾಗಿ ಇಂದು ಯಾವುದು ದೊರೆಯುವುದಿಲ್ಲ, ಇಂತಹ ಸಂದರ್ಭದಲ್ಲಿ ಪಿ.ಕೆ.ಎಸ್ ಫೌಂಡೇಷನ್ ವತಿಯಿಂದ ಉಚಿತವಾಗಿ ಅವಕಾಶ ಕಲ್ಪಿಸುತ್ತಿರುವುದು ಉತ್ತಮವಾದ ಕೆಲಸ ಇದು ಎಲ್ಲರಿಗೂ ಮಾದರಿಯಾಗಬೇಕು ಎಂದು ಸಂಸ್ಥೆಯನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಪೂಜಾ ಸಂತೋಷ್ ಮಾತನಾಡಿ ನಮ್ಮ ಸಂಸ್ಥೆಯು ಸಾಮಾಜಿಕ ಕಳಕಳಿ ಹೊಂದಿದ್ದು ಇದರ ಸದುಪಯೋಗ ಪಡಿಸಿಕೊಂಡು ಮುಂದಿನ ದಿನಗಳಲ್ಲಿ ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯಶಾಸ್ತ್ರದ ಉಪನ್ಯಾಸಕರಾದ ವಿನೋದ್ ಕುಮಾರ್ ಜಿ.ಡಿ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿ ಕಾವ್ಯ ಪ್ರಾರ್ಥನೆ ಮಾಡಿದರು, ವಿದ್ಯಾರ್ಥಿನಿ ವಜ್ರೇಶ್ವರಿ ಸ್ವಾಗತಿಸಿದರು, ಶಿಬಿರದ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now