Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹೊಳಲ್ಕೆರೆಯಲ್ಲಿ ಜ.14,15 ರಂದು ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ : ಶಾಸಕ ಡಾ.ಎಂ.ಚಂದ್ರಪ್ಪ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜ.09: ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಮಹೋತ್ಸವವು ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈಧಾನದಲ್ಲಿ ಇದೇ ಜನವರಿ 14 ಮತ್ತು 15 ರಂದು ನಡೆಯಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

 

 

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜ. 14 ರ ಬೆಳಗ್ಗೆ ಜಿ.ಬಸಪ್ಪ ಮಹಾಮಂಟಪದಲ್ಲಿ ಧ್ವಜಾರೋಹಣ ನಡೆಯಲಿದೆ. 10.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಾಡಿನ ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಚಿವರಾದ ಈಶ್ವರ ಖಂಡ್ರೆ ನೊಳಂಬ ಇತಿಹಾಸ ಹಾಗೂ ಸಂಘದ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. ನೊಳಂಬ ಸಂಚಿಕೆಯನ್ನು ಮಾಜಿ ಸಂಸದರಾದ ಬಸವರಾಜ್ ಬಿಡುಗಡೆ ಮಾಡುವರು. ಮಾಧ್ಯಾಹ್ನ 2.30 ಕ್ಕೆ ಸಾಹಿತ್ಯ ಗೋಷ್ಟಿ ನಡೆಯಲಿದ್ದು, ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ಸಿದ್ದರಾಮ ಸಾಹಿತ್ಯ ಪ್ರಶಸ್ತಿಯನ್ನು ಕತ್ತಿಗೆ ಚನ್ನಪ್ಪ ಅವರಿಗೆ ಸಂಸದರಾದ ಖೋಟಾ ಶ್ರೀನಿವಾಸ್ ಪೂಜಾರಿ ಪ್ರಧಾನ ಮಾಡಲಿದ್ದಾರೆ ಎಂದರು.

 

ಜ.15 ರ ಬೆಳಗ್ಗೆ 7.30 ಕ್ಕೆ ಇಷ್ಟಲಿಂಗ ಪೂಜಾ ವಿಧಾನ ಹಾಗೂ ಲಿಂಗಧಾರಣ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಮಹಿಳಾ ಮತ್ತು ಕೃಷಿ‌ ಗೋಷ್ಠಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಸಮಥಾ ಯೋಗಿ ಸಿದ್ದರಾಮ ಕೃತಿಯನ್ನು ಸಚಿವ ಎಂ.ಬಿ.ಪಾಟೀಲ್, ಸಿದ್ದರಾಮ ಸಂಸ್ಕೃತ ಕೃತಿಯನ್ನು ಸಚಿವೆ ಲಕ್ಷ್ಮೀಹೆಬ್ಬಾಳಕರ್ ಬಿಡುಗಡೆ ಮಾಡುವರು.
ಮಧ್ಯಾಹ್ನ 2.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹರಗುರುಚರ ಮೂರ್ತಿಗಳು ಭಾಗವಹಿಸಲಿದ್ದು, ಸಮಾರೋಪ ನುಡಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿಯಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೊಳಂಬರ ಗಥಾ ಕಥನಾ ಕೃತಿ ಬಿಡುಗಡೆ ಮಾಡುವರು. ಮಾಜಿ ಸಚಿವ ಹೆಚ್.ಆಂಜನೇಯ ಸಿದ್ದರಾಮರ ವಚನಗಳ ಧ್ವನಿ ಮುದ್ರಿಕೆಯನ್ನು ಬಿಡುಗಡೆ ಮಾಡುವರು ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

 

ಪತ್ರಿಕಾ ಗೋಷ್ಠಿಯಲ್ಲಿ ಶ್ರೀಗುರು ಸಿದ್ದರಾಮೇಶ್ವರರ 853 ನೇ ಜಯಂತಿ‌ ಮಹೋತ್ಸವದ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಸಿ.ಶಶಿಧರ್, ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಕುಭೇರಪ್ಪ, ಉಪಾಧ್ಯಕ್ಷ ರಮೇಶಪ್ಪ, ಈಶ್ವರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now