ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ವಿವಿದ ಅಭಿವೃದ್ಧಿ ಕಾಮಗಾರಿಗಳ ಯೋಜನೆಗೆ ಚಾಲನೆ ನೀಡಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿಜಯಪುರಕ್ಕೆ ತೆರಳಿದ್ದರು. ಈ ವೇಳೆ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜಿನ ಬಗ್ಗೆ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಭಾಷಣದ ನಡುವೆ ಮಾತನಾಡುತ್ತಾ, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪೊಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ ವಿಜಯಪುರ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ದೇವರಾಜ ಅರಸು ಅವರ ಏಳು ವರ್ಷ 239 ದಿನಗಳ ಸುಧೀರ್ಫ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು, ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳು ಎಂದರು.
ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ₹82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ₹730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.






