ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಜನವರಿ. 10 : ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದ ಮಹಿಳೆಯ ಚಿನ್ನದ ಸರ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದ ಕಳ್ಳರು ವೃದ್ದೆಯ ಮಾಂಗಲ್ಯ ಸರವನ್ನು ಕದ್ದಿದ್ದಾರೆ. ಬಸ್ ಹತ್ತಿ ಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದ್ದನ್ನು ಗಮನಿಸಿದ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ
ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ
ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ.
ಅನುಮಾನಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು. ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















