ಸುದ್ದಿಒನ್, ಚಳ್ಳಕೆರೆ, ಜನವರಿ. 10 : ತಾಲ್ಲೂಕಿನ ತಳಕು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸರಣಿಕಳ್ಳತನವಾಗಿದೆ. ಒಂದು ಗೊಬ್ಬರದ ಅಂಗಡಿ ಹಾಗೂ ಪ್ರಾವಿಜನ್ ಸ್ಟೋರ್ ಬೀಗ ಮುರಿದು ಒಳನುಗ್ಗಿದ ಕಳ್ಳ ಕೈಗೆ ಸಿಕ್ಕ 3 ಸಾವಿರ ಹಣ ಕಳ್ಳತನ ಮಾಡಿದ್ದು ಉಳಿದಂತೆ 5 ಗೂಡಂಗಡಿಗಳ ಬೀಗ ಮುರಿದಿದ್ದು ಕಳ್ಳತನಕ್ಕೆ ವಿಫಲಯತ್ನ ನಡೆಸಿದ್ದಾನೆ.
ಕಳ್ಳತನ ಮಾಡಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಿತು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








