ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲು ತೀರ್ಮಾನ : ಕಾರಣ ಏನು ಗೊತ್ತಾ..?

1 Min Read

ಬೆಂಗಳೂರು: ಮನರೇಗಾ ಯೋಜನೆಯ ಸ್ವರೂಪ ಹಾಗೂ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೋರಾಟಕ್ಕೆ ಸಜ್ಜಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ ನಡೆದಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ಸಂಬಂಧ ವಿಸ್ತ್ರತವಾಗಿ ಚರ್ಚೆ ನಡೆಸಲಾಗಿದೆ. ಜೊತೆಗೆ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೂ ತೀರ್ಮಾನ ಮಾಡಲಾಗಿದೆ.

ಈ ಸಂಬಂಧ ವಿಧಾನ ಪರಿಷತ್ ಅಧಿವೇಶನವನ್ನು 22-1-2026 ರಂದು ಕರೆಯಲು ತೀರ್ಮಾನಿಸಲಾಗಿದೆ. ಅಂದು ಜಂಟಿ ಅಧುವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದಕ್ಕೆ ರಾಜ್ಯಪಾಲರನ್ನ ಆಹ್ವಾನ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಜಂಟಿ ಸಭೆಯನ್ನು ಬೆಳಗ್ಗೆ 11 ಗಂಟೆಗೆ ಕರೆಯುವುದಕ್ಕೆ ಉದ್ದೇಶಿಲಾಗಿದೆ. ಜನವರಿ 22 ರಿಂದ 31ರವರೆಗೆ ಈ ಅಧಿವೇಶನ ನಡೆಯಲಿದೆ.

ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ. ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆಯನ್ನು ಸರ್ಕಾರ ಇಡಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ರಾಜ್ಯದ ಜನರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಸರ್ಕಾರ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಶೇಷ ಅಧಿವೇಶನದಲ್ಲಿ ಏನೆಲ್ಲಾ ಚರ್ಚೆಗಳು ನಡೆಯಲಿವೆ ಎಂಬುದನ್ನ ರಾಜ್ಯದ ಜನತೆ ಕೂಡ ಕಾಯ್ತಾ ಇದ್ದಾರೆ.

Share This Article