ಬೆಂಗಳೂರು: ಸಿಎಂ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಭೇಟಿಗೆ ಹರಸಾಹಸ ಪಡುತ್ತಿದ್ದಾರೆ. ಹಲವು ಬಾರಿ ದೆಹಲಿಗೆ ಹೋಗಿ ಬಂದ್ರು ಕೂಡ, ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಸಿಕ್ಕಿಲ್ಲ. ನಿನ್ನೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹದಿನೈದು ನಿಮಿಷಗಳ ಕಾಲ ಭೇಟಿಯಾಗಿದ್ದರು. ದೆಹಲಿಗೆ ಬರುವಂತೆ ಸೂಚನೆ ಸಿಕ್ಕಿದೆ ಎನ್ನಲಾಗಿತ್ತು. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಕೆಪಿಸಿಸಿ ಅಧೈಕ್ಷ. ರಾಹುಕ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ನೀವೂಗಳು ನಿಮಗೆ ಇಚ್ಛೆ ಬಂದಂತೆ ಗೊಂದಲವನ್ನು ಸೃಷ್ಟಿ ಮಾಡಿಕೊಳ್ಳುತ್ತಿದ್ದೀರಿ. ನಾವುಯ ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನು ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ ಇದನ್ನೇ ಮುಂದುವರೆಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ. ನಾನು ಹೊಸದಾಗಿ ಯಾವುದೇ ಮಾತನ್ನು ಹೇಳುತ್ತಿಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ನಾನು ಅಲ್ಲಿ ಉದ್ಯಮಿಗಳ ಜೊತೆಗೆ ನನ್ನ ಅನುಭವದ ಮಾತುಗಳನ್ನು ಹೇಳಿಕೊಂಡಿದ್ದೇನೆ ಎಂದರು. ದೆಹಲಿಗೆ ತೆರಳುತ್ತಿದ್ದೀರಾ ಎಂದು ಕೇಳಿದಾಗ, ಜ.16ರಂದು ದೆಹಲಿಗೆ ತೆರಳುತ್ತಿದ್ದೇನೆ ಎಂದು ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಹೇಳಿಕೆಯನ್ನ ಡಿಕೆ ಶಿವಕುಮಾರ್ ಅವರೇ ಟ್ವೀಟ್ ಮಾಡಿದ್ದರು. ಅದಕ್ಕೆ ಉತ್ತರಿಸಿದ್ದಾರೆ.

