Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ : ದುಃಖದಲ್ಲಿ ಭಕ್ತರು

---Advertisement---

ರಾಯಚೂರು: ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ಇಂದು ವಿಧಿವಶರಾಗಿದ್ದಾರೆ. ಬೆಳಗಿನ ಜಾವ 3.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಇದರಿಂದ ಎಲ್ಕರನ್ನು ಅಗಲಿದ್ದಾರೆ. ಸ್ವಾಮೀಜಿ ಅವರು ಸದಾ ಕಾಲ ಲವಲವಿಕೆಯಿಂದಾನೇ ಓಡಾಡಿಕೊಂಡು ಇದ್ದರು. ಆದರೆ ಹೃದಯಾಘಾತ ಅವರನ್ನು ಇಹಲೋಕ ತ್ಯಜಿಸುವಂತೆ ಮಾಡಿದೆ. ಸ್ವಾಮೀಜಿಗೆ ಇನ್ನು 50 ವರ್ಷ ವಯಸ್ಸಾಗಿತ್ತು ಅಷ್ಟೇ.

ಇದೇ ತಿಂಗಳು 12, 13, 14 ರಂದು ಅಂದ್ರೆ ನಿನ್ನೆಯ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ರು. ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ ಪೂಜಾರಿಗಳ ಶಿಬಿರ ಅದ್ದೂರಿಯಾಗಿ ನಡೆದಿತ್ತು. ಮೊದಲ ಬಾರಿಗೆ ರಾಜಕೀಯ ವ್ಯಕ್ತಿಗಳಿಂದ ಮುಕ್ತವಾದ ಕಾರ್ಯಕ್ರಮ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಇಷ್ಟೆಲ್ಲಾ ಕಾರ್ಯಕ್ರಮವಿದ್ದ ಕಾರಣದಿಂದ ಸ್ವಾಮೀಜಿ ಕೂಡ ಎಲ್ಲೆಡೆ ಓಡಾಟ ನಡೆಸಿದ್ದರು. ಸರಿಯಾಗಿ ಊಟ – ತಿಂಡಿಯನ್ನು ಮಾಡಿರಲಿಲ್ಲ.

ಬುಧವಾರ ರಾತ್ರಿ ಲೊ ಬಿಪಿಯಿಂದ ಸ್ವಾಮೀಜಿ ಬಳಲುತ್ತಿದ್ದರು. ಕೂಡಲೇ ಅವರನ್ನು ಲಿಂಗಸಗೂರು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಡೀ ಭಕ್ತ ಸಮುದಾಯವನ್ನೇ ಬಿಟ್ಟು ಹೊರಟಿದ್ದಾರೆ. ಸಿದ್ದರಾಮಾನಂದ ಸ್ವಾಮೀಜಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿಯವರು. ಮಹದೇವಯ್ಯ ಹಾಗೂ ಜಯಮ್ಮ ದಂಪತಿಯ ಎರಡನೇ ಪುತ್ರ. ಇವರ ಮೂಲ ಹೆಸರು ಮೋಹನ್ ಪ್ರದಾನ. ತಮ್ಮ 18ನೇ ವಯಸ್ಸಿಗೇನೆ ಮನೆ ತೊರೆದರು. ಇವರನ್ನ ಹೆಚ್ಚು ಪ್ರಭಾವಕ್ಕೆ ಒಳಗಾಗಿಸಿದ್ದು, ಜೈನ, ಜ್ರೈಸ್ತ, ಬ್ರಹ್ಮಕುಮಾರಿ ಪಂಥಗಳೇ ಆಗಿದ್ದವು‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now