Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ.19ರಂದು ಮಹಾಯೋಗಿ ವೇಮನ ಜಯಂತಿ

---Advertisement---

 

ಚಿತ್ರದುರ್ಗ. ಜ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಇದೇ ಜ.19ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ “ಮಹಾಯೋಗಿ ವೇಮನ” ಜಯಂತಿ ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

 

ಹರಿಹರ ತಾಲ್ಲೂಕು ಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

 

ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ. ಶ್ರೀನಿವಾಸ್ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ಹಾಗೂ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ರೆಡ್ಡಿ ಸಮಾಜದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಗಣ್ಯರು ಭಾಗವಹಿಸುವರು.

ಚಳ್ಳಕೆರೆ ತಾಲ್ಲೂಕು ಬೇಡರೆಡ್ಡಿಹಳ್ಳಿಯ ಸಾಹಿತಿ ಎಸ್.ಬಿ.ಭೀಮಾರೆಡ್ಡಿ ಉಪನ್ಯಾಸ ನೀಡುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ ಗುರುನಾಥ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...