Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಗಣಿ ಅದಿರನ್ನು ಲಾರಿಗಳ ಬದಲು ರೈಲ್ವೆ ವ್ಯಾಗಿನ್‌ಗಳ ಮೂಲಕ ಸಾಗಿಸಲಿ : ಡಾ. ವಿಜಯಕುಮಾರ್ ಒತ್ತಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.17 : ಗಣಿ ಅದಿರನ್ನು ಲಾರಿಗಳ ಬದಲು ರೈಲ್ವೆ ವ್ಯಾಗಿನ್‌ಗಳ ಮೂಲಕ ಸಾಗಾಟ ಮಾಡಿದರೆ ಯಾರಿಗೂ ತೊಂದರೆಯಾಗದು ಎಂದು ಖ್ಯಾತ ಮಕ್ಕಳ ತಜ್ಞರು ಡಾ. ಪಿ.ಟಿ. ವಿಜಯಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿರುವ ಡಾ. ಪಿ.ಟಿ. ವಿಜಯಕುಮಾರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮತ್ತೊಮ್ಮೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

ಅದಿರನ್ನು ರಸ್ತೆ ಮೂಲಕ ಸಾಗಾಟ ಮಾಡುವುದರಿಂದ ಗ್ರಾಮಸ್ಥರ ಆರೋಗ್ಯ ಹಾಗೂ ಪರಿಸರ ಸುಧಾರಣೆಗೆ ಸಾಕಷ್ಟು ತೊಂದರೆಯಾಗುತ್ತದೆ. ಆದ್ದರಿಂದ ಅದಿರನ್ನು ರಸ್ತೆ ಮಾರ್ಗದ ಬದಲಾಗಿ ರೈಲು ಮಾರ್ಗದ ಮುಖಾಂತರ ಸಾಗಾಟ ಮಾಡಿದರೆ ರಸ್ತೆಗಳು ಹಾಳಾಗುವುದಿಲ್ಲ. ಗ್ರಾಮಸ್ಥರ ಆರೋಗ್ಯ ಚೆನ್ನಾಗಿ ಸುಧಾರಿಸಿ ಆಯುಷ್ಯ ಹೆಚ್ಚಾಗುತ್ತದೆ. ರೈತರ ತೋಟ ಮತ್ತು ಬೆಳೆಗಳು ಉಳಿಯಲಿವೆ. ಅಪಘಾತಗಳು ಸಂಭವಿಸುವುದಿಲ್ಲ.

ಈ ಎಲ್ಲಾ ವಿಚಾರಗಳನ್ನು ಅನೇಕ ಬಾರಿ ಪ್ರತಿಭಟನೆ ಮೂಲಕ ಸುದೀರ್ಘ ಮನವಿಯನ್ನು ಸಂಬಂಧಪಟ್ಟ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳಿಗೆ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಮತ್ತು ಇತರೆ ಅಧಿಕಾರ ವೃಂದದವರು ಮನಸ್ಸು ಮಾಡಿದರೆ ಮತ್ತು ಇಚ್ಛಾಶಕ್ತಿಯಿಂದ ಸಾಮಾನ್ಯ ಪ್ರಜ್ಞೆ ಉಪಯೋಗಿಸಿ ಲಭ್ಯವಿರುವ ಜಿಲ್ಲಾ ಖನಿಜ ನಿಧಿ ಅನುದಾನವನ್ನು ಬಳಸಿಕೊಂಡು ವಿವರವಾದ ಯೋಜನಾ ವರದಿ ಸಿದ್ಧಪಡಿಸಿ ರೈಲ್ವೆ ವ್ಯಾಗಿನ್‌ಗಳ ಮೂಲಕ ಅದಿರು ಸಾಗಾಟ ಮಾಡಲು ಸೂಕ್ತ ಏರ್ಪಾಟು ಮಾಡಿದ್ದಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ತಮ್ಮ ಸಾಮಾಜಿಕ ಕಳಕಳಿಯ ಮೂಲಕ
ನೊಂದ ಗ್ರಾಮಸ್ಥರು ಮತ್ತು ಸಾರ್ವಜನಿಕರ ಪರವಾಗಿ ಮನವಿ ಮಾಡಿದ್ದಾರೆ.

ಡಾ. ಪಿ.ಟಿ. ವಿಜಯಕುಮಾರ್‌
ಹಿರಿಯ ಮತ್ತು ತಜ್ಞರು
ನಿಕಟಪೂರ್ವ ಅಧ್ಯಕ್ಷರು,
ಭಾರತೀಯ ವೈದ್ಯಕೀಯ ಸಂಘ, ಚಿತ್ರದುರ್ಗ ಶಾಖೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...