Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂದಗಡಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಸುದ್ದಿಒನ್, ಬೆಳಗಾವಿ, ಜನವರಿ. 19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರಾಂತಿವೀರ ಸಂಗೊಳ್ಳಿರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಭೇಟಿ ನೀಡಿ ವೀರಭೂಮಿಯಲ್ಲಿನ ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ರಾಯಣ್ಣನ ಅಭಿಮಾನಿಗಳು ಮುಖ್ಯಮಂತ್ರಿಗಳ ಹಣೆಗೆ ಭಂಡಾರ ಹಚ್ಚುವ ಮೂಲಕ ಅಭಿಮಾನ ಮೆರೆದರು.‌

ಬಳಿಕ ನಾನಾ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಗ್ಯಾರಂಟಿ ಅನುಷ್ಠಾನ‌ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳು, ವಿಧಾನ‌ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಗೂ ರಾಯಣ್ಣ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...