ಚಿತ್ರದುರ್ಗ. ಜ.20: ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27 ನೇ ಸಾಲಿಗಾಗಿ ಮಾಜಿ ಸೈನಿಕರನ್ನು ಒಪ್ಪಂದದ ಮೇರೆಗೆ 30 ಎನ್.ಸಿ.ಸಿ ಬೋಧಕರ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನಾಂಕವಾಗಿದೆ.
ಆಸಕ್ತರು ಅರ್ಜಿಯನ್ನು ಇಮೇಲ್ jtdirpc.kardte@nccindia.nic.in ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa) KSCMF, Building, 4th Floor, No-8, Cunningham Road, Bengaluru-560001 ಮೂಲಕ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://nccindia.gov.in ಜಾಲತಾಣವನ್ನು ಅಥವಾ ಮೊಬೈಲ್ 9481405092 ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
ಎನ್.ಸಿ.ಸಿ ಯಲ್ಲಿ ನಿವೃತ್ತ ಸೈನ್ಯಾಧಿಕಾರಿಗಳಿಗೆ ಒಪ್ಪಂದದ ಮೇರೆಗೆ ಶಿಸ್ತು ಮತ್ತು ಜಾಗೃತ ಹುದ್ದೆಗೆ ನೇಮಕಾತಿ
ಚಿತ್ರದುರ್ಗ. ಜ.20:
ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27 ನೇ ಸಾಲಿನಲ್ಲಿ ಓರ್ವ ನಿವೃತ್ತ ಸೈನ್ಯಾಧಿಕಾರಿಗಳಿಗೆ ಒಪ್ಪಂದದ ಮೇರೆಗೆ ಶಿಸ್ತು ಮತ್ತು ಜಾಗೃತಿ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನಾಂಕವಾಗಿರುತ್ತದೆ.
ಆಸಕ್ತರು ಅರ್ಜಿಯನ್ನು ಇಮೇಲ್ jtdirpc.kardte@nccindia.nic.in ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa) KSCMF, Building, 4th Floor, No-8, Cunningham Road, Bengaluru-560001 ಮೂಲಕ ಸಲ್ಲಿಸಬೇಕಾಗಿರುತ್ತದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.















