ಬೆಂಗಳೂರು: ಶಾಮನೂರು ಶಿವಶಂಕರ್ ಅವರಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಫೈಟ್ ಶುರುವಾಗಿದೆ. ಕಾಂಗ್ರೆಸ್ ನಿಂದ ಯಾರು ನಿಲ್ಲಬಹುದು ಎಂಬ ಕುತೂಹಲದ ಪ್ರಶ್ನೆ ನಡುವೆ ಬಿಜೆಪಿಯಲ್ಲಿಯೇ ಟಿಕೆಟ್ ಫೈಟ್ ಶುರುವಾಗಿದೆ ಎನ್ನಲಾಗಿದೆ. ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯಬೇಕು ಎಂಬ ಲೆಕ್ಕಚಾರ ಶುರುವಾಗಿದೆ ಎನ್ನಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಪಾಲಾಗುತ್ತಿತ್ತು. ಬಿಜೆಪಿ ಎದುರು ಶಾಮನೂರು ಶಿವಶಂಕರಪ್ಪನವರೇ ಗೆಲುವು ಸಾಧಿಸುತ್ತಿದ್ದರು. ಈ ಬಾರಿ ಅಲ್ಪಸಂಖ್ಯಾತರಿಗೆ ಈ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಚರ್ಚೆಗಳು ನಡೆಯುತ್ತಿವೆ. ಆದರೆ ಕಾಂಗ್ರೆಸ್ ನಾಯಕರು ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ. ಅದೇ ಕುಟುಂಬಕ್ಕೆ ಟಿಕೆಟ್ ನೀಡಿದರೆ ಮಾತ್ರ ಗೆಲುವುವ ಸಾಧ್ಯ ಎನ್ನುತ್ತಿದ್ದಾರೆ.
ಇತ್ತ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದ್ದು, ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಟೀಮ್‌ನಿಂದ ಯಶವಂತರಾವ್ ಜಾಧವ್, ಶ್ರೀನಿವಾಸ್ ದಾಸ್ ಕರಿಯಪ್ಪ ಇದ್ದರೆ ಇತ್ತ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಟೀಮ್‌ನಿಂದ ಕಳೆದ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಜಯ್ ಕುಮಾರ್‌ಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಜೊತೆಗೆ ಬಿಜೆಪಿಯಲ್ಲೂ ಜಿ.ಎಂ.ಸಿದ್ದೇಶ್ವರ್ ಕುಟುಂಬಕ್ಕೆ ಟಿಕೆಟ್ ನೀಡಲು ಒತ್ತಾಯ ಕೇಳಿ ಬರುತ್ತಿದೆ. ಯಾಕಂದ್ರೆ ಶಾಮನೂರು ಶಿವಶಂಕರಪ್ಪ ಅವರಿಗೆ ಟಕ್ಕರ್ ಕೊಡೋದಕ್ಕೆ ಇವರಿಂದ ಮಾತ್ರ ಸಾಧ್ಯ ಎಂಬ ಕಾರಣಕ್ಕೆ. ಆದ್ರೆ ಸಿದ್ದೇಶ್ವರ್ ಅವರು ಕಾರ್ಯಕರ್ತರಿಗೆ ಟಿಕೆಟ್ ನೀಡಿ, ಅವರನ್ನೇ ಗೆಲ್ಲಿಸಿಕೊಂಡು ಬರುತ್ತೇವೆ ಎನ್ನುತ್ತಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಎರಡು ಪಕ್ಷಗಳು ಯಾವ ತೀರ್ಮಾನಕ್ಕೆ ಬರ್ತವೇ ಎಂಬುದನ್ನ ಕಾದು ನೋಡಬೇಕಿದೆ.






