Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಫೆ.1ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

---Advertisement---

ಚಿತ್ರದುರ್ಗ. ಜ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ 2026ರ ಫೆಬ್ರವರಿ 1ರಂದು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ “ಜಿಲ್ಲಾ ಮಟ್ಟದ ಉದ್ಯೋಗ ಮೇಳ” ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ರಾಜ್ಯದ ಹಲವಾರು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮಾ, ಬಿ.ಇ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. 18 ರಿಂದ 35 ವರ್ಷದೊಳಗಿನ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಹಾಜರಾಗಬಹುದಾಗಿದೆ.

 

ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳ ನೊಂದಣಿ ಕಡ್ಡಾಯವಾಗಿದೆ. ಅಭ್ಯಥಿಗಳು ಕನಿಷ್ಠ 05 ಬಯೋಡೇಟಾ ಪ್ರತಿಗಳು ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಅನ್ನು ಕಡ್ಡಾಯವಾಗಿ ತರಬೇಕು. ಈ ಉದ್ಯೋಗ ಮೇಳವು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳು ಕ್ಯೂಆರ್ ಕೋಡ್ ಮೂಲಕ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್‍ನ ಎನ್‍ಆರ್‍ಎಲ್‍ಎಂ ಘಟಕ ಅಥವಾ ಜಿಲ್ಲೆ ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯತ್ ಎನ್‍ಆರ್‍ಎಲ್‍ಎಂ ವಿಭಾಗ  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now