ಚಿತ್ರದುರ್ಗ. ಜ.25: ಜಿಲ್ಲಾಡಳಿತ ವತಿಯಿಂದ ಇದೇ ಜ.26ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾರತದ ಗಣರಾಜ್ಯೋತ್ಸವ ದಿನಾಚರಣೆ ಆಯೋಜಿಸಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ಮತ್ತು ಗಣರಾಜ್ಯೋತ್ಸವ ಸಂದೇಶ ನೀಡುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಸೇರಿದಂತೆ ನಗರಸಭೆ ಸದಸ್ಯರು, ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುವರು.
ಜಿಲ್ಲಾ ಆಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಸಂಜೆ 6ಕ್ಕೆ ಚಿತ್ರದುರ್ಗ ಪ್ರಶಾಂತ ನಗರದ ಜಿ.ಜಿ.ಕಲ್ಯಾಣ ಮಂಟಪದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗಣರಾಜ್ಯೋತ್ಸವ ಅಂಗವಾಗಿ ವಿವಿಧ ಅಧಿಕಾರಿ ಸಿಬ್ಬಂದಿಗೆ ಸನ್ಮಾನ:
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 14 ಮಂದಿ ಅಧಿಕಾರಿಗಳು ಹಾಗೂ ನೌಕರರು ಗಣರಾಜ್ಯೋತ್ಸವ ಸಂದರ್ಭದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.
ಹೊಳಲ್ಕೆರೆ ತಾಲ್ಲೂಕು ಕಚೇರಿಯ ಚುನಾವಣಾ ಶಿರಸ್ತೇದಾರ್ ಹೆಚ್.ಆರ್.ಸನಾವುಲ್ಲಾ, ಹೊಸದುರ್ಗ ತಾಲ್ಲೂಕು ಕಚೇರಿಯ ಚುನಾವಣಾ ಶಿರಸ್ತೇದಾರ್ ಬಿ.ಎಂ.ಶಿವಾನಂದ ಮೂರ್ತಿ, ಚಳ್ಳಕೆರೆ ತಾಲ್ಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಜಿ.ಛಾಯಪತಿ, ಶಿಕ್ಷಣ ಇಲಾಖೆ-ಮಠದ ಕುರುಬರಹಟ್ಟಿಯ ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಎಲ್.ತಿಮ್ಮರಾಜ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಚಿತ್ರದುರ್ಗ ಬಡಾವಣೆ ವೃತ್ತ ಪೊಲೀಸ್ ವೃತ್ತ ನಿರೀಕ್ಷಕ ಎನ್.ತಿಮ್ಮಣ್ಣ, ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಆನಂದ, ಚಳ್ಳಕೆರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕುಮಾರ್, ಕೃಷಿ ಇಲಾಖೆ ಹೊಸದುರ್ಗ ಸಹಾಯಕ ನಿರ್ದೇಶಕ ಸಿ.ಎಸ್.ಈಶ, ಹಿರಿಯೂರು ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿ ಜಿ.ರೇಖಾವತಿ, ಚಿತ್ರದುರ್ಗ ತಾಲ್ಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಹಿತ್ ಕುಮಾರ್ ಯಾದವ್, ಚಿತ್ರದುರ್ಗ ತಾಲ್ಲೂಕು ಭರಮಸಾಗರ ಹೋಬಳಿ ಬ್ಯಾಲಹಾಳು ಕಂದಾಯ ವೃತ್ತ, ಪ್ರಭಾರ ಕೊಳಹಾಳು ವೃತ್ತದ ಗ್ರಾಮ ಆಡಳಿತ ಅಧಿಕಾರಿ ಬಿ.ಆರ್.ಪ್ರಿಯ, ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಗೊಡಬನಹಾಳು ಕಂದಾಯ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಶ್ರೀದೇವಿ, ಹೊಳಲ್ಕೆರೆ ತಾಲ್ಲೂಕು ಕಸಬಾ ಹೋಬಳಿ ಗ್ರಾಮ ಸಹಾಯಕಿ ಟಿ.ಭಾಗ್ಯಮ್ಮ ಅವರು ಸೇರಿದಂತೆ ಒಟ್ಟು 14 ಮಂದಿ ಅಧಿಕಾರಿ, ನೌಕರರನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.






